ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಪ್ರಸ್ತುತಪಡಿಸಿದ “ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09ರ ಆದಿತ್ಯವಾರ ದುಬೈಯ ಶೇಖ್ ರಶೀದ್ ಅಡಿಟೋರಿಯಂನಲ್ಲಿ ಸಂಪನ್ನಗೊಂಡಿತು.
Month: June 2024
ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.
ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.
ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಜೂನ್ 11) ಪ್ರಕಟಿಸಿದೆ. ಲೆಫ್ಟಿನೆಂಟ್ ಉಪೇಂದ್ರ ದ್ವಿವೇದಿ ಅವರು ಈ ಹಿಂದೆ ಸೇನೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಧಿಕಾರಾವಧಿಯು ಜೂನ್ 30, 2024 ರಿಂದ ಪ್ರಾರಂಭವಾಗುತ್ತದೆ.
ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು…
ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲೈ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜೂ. 13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.
ಸುಮುಖ ಪೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ನಾಯಕ ನಟ ಸಿದ್ಧಾರ್ಥ್ ಎಚ್ ಶೆಟ್ಟಿ ಹೇಳಿದರು.
ಆಪ್ತರ ಹೇಳಿಕೆಯಿಂದಲೇ ನಟ ದರ್ಶನ್ ಅರೆಸ್ಟ್ ಆಗಿದೆ. ಶನಿವಾರ (ಜೂನ್ 8) ಚಿತ್ರದುರ್ಗದಿಂದ ಬೆಳಿಗ್ಗೆ ರೇಣುಕಾ ಸ್ವಾಮಿಯನ್ನು ರಾಘವೇಂದ್ರ ಕರೆದುಕೊಂಡು ಬಂದಿದ್ದ. ಶನಿವಾರ 1 ಗಂಟೆಗೆ ಬೆಂಗಳೂರಿಗೆ ಬಂದಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿಗೆ ಬಂದಿದ್ದ ರೇಣುಕಾ ಸ್ವಾಮಿಯನ್ನು ಮಧ್ಯಾಹ್ನ 2.30ಕ್ಕೆ ಶೆಡ್ಗೆ ಕರೆದುಕೊಂಡು ಹೋಗಿದ್ದರು. 3 ಗಂಟೆ ನಂತರ ದರ್ಶನ್ ಆ ಶೆಡ್ಡಿಗೆ ಎಂಟ್ರಿ ನೀಡಿದ್ದು ಗೊತ್ತಾಗಿದೆ. ದರ್ಶನ್ ಸಮ್ಮುಖದಲ್ಲೇ ಹಲ್ಲೆ ನಡೆದಿದೆ. ಶನಿವಾರ ರಾತ್ರಿ ಶವವನ್ನು ಆರೋಪಿಗಳು ಎಸೆದು ಹೋಗಿದ್ದರು ಎಂಬುವುದಕ್ಕೆ ಸಾಕ್ಷಿ ಲಭ್ಯವಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಕೆ ವಿ ಸಿಂಗ್ ದಿಯೋ ಮತ್ತು ಪ್ರವತಿ ಪರಿದಾ ಅವರನ್ನು ಆಯ್ಕೆ ಮಾಡಲಾಗಿದೆ.
ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.