ಸೋಮವಾರ ರಾತ್ರಿ ಬೆಚ್ಚಗೆ ಮಲಗಿದ್ದವರಿಗೆ ಇಂತಹದ್ದೊಂದು ಭೀಕರ ಘಟನೆ ನಡೆದು ಹೋಗುತ್ತದೆ ಎಂಬ ಅರಿವು ಇರಲು ಸಾಧ್ಯವೇ ಇರಲಿಲ್ಲ. ಅಷ್ಟು ಸಮೃದ್ಧವಾಗಿ ಬೆಳೆದು ನಿಂತ ಸಸ್ಯಶ್ಯಾಮಲೆಯ ಮಡಿಲು ವಯನಾಡು. ಆದರೆ, ಇಂದು ದೇಹದ ಒಂದು ಭಾಗದ ಚರ್ಮವನ್ನು ಕಿತ್ತು ತೆಗೆದಂತಹ ಚಿತ್ರಣ ನಮ್ಮ ಮುಂದಿದೆ.
Month: July 2024
ಕೇರಳKeralaದ ವಯನಾಡ್ನಲ್ಲಿ ಸಂಭವಿಸಿದ ಭೀಕರ ಭೂಕುಸಿತ (Wayanad Landslide)ದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ವಯನಾಡ್ ಭೂಕುಸಿತದಲ್ಲಿ ಸಾವಿನ ಸಂಖ್ಯೆ…
ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ.
ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ.
ಹೀಗೆ ಸಂಚರಿಸಿ:
ಮಂಗಳೂರು – ಬೆಂಗಳೂರು ಸಂಚಾರಕ್ಕೆ ಇದೀಗ ಶಿರಾಡಿ ಸಂಪೂರ್ಣ ಬಂದ್ ಆಗಿದೆ. ಆದ್ದರಿಂದ ತುರ್ತು ತೆರಳುವವರು ಸಂಪಾಜೆ – ಮಡಿಕೇರಿಯಾಗಿ ಅಥವಾ ಬೆಳ್ತಂಗಡಿ – ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ತೆರಳಬಹುದು ಎಂದು ಮಾಹಿತಿ ಲಭ್ಯವಾಗಿದೆ.
ಬಸ್ ಪ್ರಯಾಣಿಕರಿಗೆ ಹಾರ್ಟ್ ಅಟ್ಯಾಕ್ ಸೂಚನೆ ದೊರಕಿದ ತಕ್ಷಣ, ಬಸ್ ನೇರವಾಗಿ ಆಸ್ಪತ್ರೆ ಒಳಾಂಗಣಕ್ಕೆ ನುಗ್ಗಿ ಚಿಕಿತ್ಸೆ ಕೊಡಿಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು.
ಹೊಸಪೇಟೆ: ಭಾರಿ ಮಳೆಯಾಗುತ್ತಿದ್ದು, ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ಪ್ರವಾಸಿಗರಿಗೆ ವಿಜಯನಗರ ಆಡಳಿತ ಎಚ್ಚರಿಕೆ ನೀಡಿದೆ.
ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಇಟ್ಟುಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜುಲೈ 31ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ…
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ಕವಚದಾನ -ಕರ್ಣ ವಿವಾಹ ತಾಳಮದ್ದಳೆ ಜರಗಿತು.
ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ – ಮೈಸೂರು ಹೆದ್ದಾರಿ ಸಂಚಾರಕ್ಕೆ ತೆರೆದುಕೊಂಡಿದೆ.