ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು ತಿಳಿಸಿವೆ.
Month: July 2024
ದರ್ಬೆಯ ಗುರುಪ್ರಸಾದ್ ಮೋಟಾರ್ ವರ್ಕ್ಸ್ ಹಾಗೂ ಗುರುಪ್ರಸಾದ್ ಕಟ್ಟಡದ ಮಾಲಕ, ದರ್ಬೆ ನಿವಾಸಿ ವಾಸುದೇವ ಆಚಾರ್ಯ (77 ವ.) ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.
ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತಗೊಂಡಿದೆ. ಪರಿಣಾಮ ಮಂಗಳೂರು – ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್ ಸಂಪರ್ಕ ಕಡಿತಗೊಂಡಿದೆ.
ನೆಹರುನಗರ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಭರತ್ (44 ವ.) ದುಬೈಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಮೃತದೇಹವನ್ನು ಸ್ವಗೃಹಕ್ಕೆ ತರಲಾಯಿತು.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಜರಿದ ಹಿನ್ನಲೆ ಮಂಗಳೂರು-ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ.
ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಶೀಘ್ರ ಬಂಧಮುಕ್ತವಾಗಲೆಂದು ದರ್ಶನ್ ಪತ್ನಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋಗಿದ್ದಾರೆ,
ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ.