ಭಾರತೀಯ ಹಾಕಿ ತಂಡದ ಹಿರಿಯ ಆಟಗಾರ, ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರು ಅಂತಾರಾಷ್ಟ್ರೀಯ ಹಾಕಿಗೆ (International Hockey) ವಿದಾಯ ಹೇಳಲು ನಿರ್ಧರಿಸಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಅವರ ಕೊನೆಯ ಅಂತಾರಾಷ್ಟ್ರೀಯ ಕೂಟವಾಗಿರಲಿದೆ.
Month: July 2024
ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು.
ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರನ್ನು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕು ಆಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯವು ಮತ್ತೊಂದು ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಈ ರೈಲು ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರದವರೆಗೆ ಸಂಚರಿಸಲಿದೆ. ಬಳಿಕ ಬೆಂಗಳೂರಿಗೆ ಮರಳಲಿದೆ.
ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.
ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.
ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಝಾರೊಂದಿಗಿನ ವಿವಾಹದ ವದಂತಿಯ ಕುರಿತು ಕೊನೆಗೂ ಮೌನ ಮುರಿದಿರುವ ಭಾರತೀಯ ಕ್ರಿಕೆಟರ್ ಮುಹಮ್ಮದ್ ಶಮಿ, ಜನರು ಇಂತಹ ಸುಳ್ಳುಗಳನ್ನು ಹರಡುವುದರಿಂದ ದೂರ ಉಳಿಯಬೇಕು ಎಂದು ಮನವಿ ಮಾಡಿದ್ದಾರೆ. ಇಂತಹ ಸುಳ್ಳು ಮೀಮ್ ಗಳು ಮೊದಲಿಗೆ ಮನರಂಜನೆ ನೀಡುತ್ತವಾದರೂ, ಕೊನೆಗೆ ಹಾನಿಯನ್ನುಂಟು ಮಾಡುತ್ತವೆ ಎಂದು ಅವರು ಕಿವಿಮಾತು ಹೇಳಿದ್ದಾರೆ.
ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.