ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ಕಾಪರ್ ಏಜ್ ಗ್ರೂಪ್ ಇನ್ಸಿಟ್ಯೂಟ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.
Year: 2024
ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ.
ಪುತ್ತೂರು: ಸಣ್ಣ ಮಟ್ಟದ ಮಣ್ಣು ತಪಾಸಣೆ ಯಂತ್ರವನ್ನು ಕ್ಯಾಂಪ್ಕೊ ಖರೀದಿಸಿದ್ದು, ಮೊಬೈಲ್ ಕೇಂದ್ರವನ್ನು ಪುತ್ತೂರಿನಲ್ಲಿ ಸ್ಥಾಪಿಸಲಾಗುವುದು.1.45 ಲಕ್ಷ ಸದಸ್ಯರಿದ್ದು, ಎಲ್ಲರ ಹಿತಕಾಯುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾದ ಕುಖ್ಯಾತ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43)ನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರ ಸಂಜೆ ಬಂಧಿಸಿದ್ದಾರೆ.
ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ.
12 ವರ್ಷದ ಲ್ಯಾಬ್ರಡಾರ್ ತಳಿಯ ಶ್ವಾನ ಜಾಕ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರ(ನ22) ಭಾವನಾತ್ಮಕ ವಿದಾಯ ಹೇಳಿದೆ
ಖಾಸಗಿ ಬಸ್, ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ.
2024-25 ನೇ ಸಾಲಿನ ಶ್ರೀ ತುಲ್ಸೀ ತಂತಿ ಸ್ಕಾಲರ್ಶಿಪ್ 9 ಮತ್ತು 10, ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಅರ್ಹರು.
ವಾಟ್ಸ್ ಆ್ಯಪ್ ನೆರವಿನಿಂದ ಹೆರಿಗೆ!! ವಿಲಕ್ಷಣ ಘಟನೆ ಬಗ್ಗೆ ತನಿಖೆಗೆ ಮುಂದಾದ ಆಡಳಿತ! ವೈದ್ಯಕೀಯ ತಪಾಸಣೆ ನಿರಾಕರಿಸಿದ್ದ ಗರ್ಭಿಣಿ ಸುಕನ್ಯಾ!
ಅಕ್ಷಯ ಕಾಲೇಜು ಪುತ್ತೂರು ಇದರ ಆಶ್ರಯದಲ್ಲಿ ನ16 ರಂದು ನಡೆದ ‘ಎಟರ್ನಸ್ – 2024’ ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.