ಬೆಂಗಳೂರು: ಲೋಕಸಭಾ ಚುನಾವಣೆ ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಸಹ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ.
ಇದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿ.ಕೆ. ಸುರೇಶ್, ಶಿವಮೊಗ್ಗದಿಂದ ಗೀತಾ ಶಿವರಾಜ್ಕುಮಾರ್, ತುಮಕೂರಿನಿಂದ ಮುದ್ದಹನುಮೇಗೌಡ ಸೇರಿದಂತೆ ಕರ್ನಾಟಕದ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಮೊದಲು ಮಾಧ್ಯಮಗಳಿಗೆ ಲಭ್ಯವಾಗಿದ್ದ ಕಾಂಗ್ರೆಸ್ ಪಟ್ಟಿಯಲ್ಲಿ ಉಡುಪಿ- ಚಿಕ್ಕಮಗಳೂರಿಂದ ಜಯಪ್ರಕಾಶ್ ಹೆಗ್ಡೆ ಹಾಗೂ ಚಿತ್ರದುರ್ಗದಿಂದ ಬಿ.ಎನ್. ಚಂದ್ರಪ್ಪ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ಈಗ ಅಧಿಕೃತ ಪಟ್ಟಿಯಲ್ಲಿ ಇವರ ಪ್ರಸ್ತಾಪವೇ ಇಲ್ಲ.
ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗಳ ಪಟ್ಟಿ
ಅಭ್ಯರ್ಥಿಗಳ ಆಯ್ಕೆ ಸಂಬಂಧ ಗುರುವಾರದಿಂದ ನವ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆ ರಾಜ್ಯ ನಾಯಕರು ಸಭೆ ನಡೆಸುತ್ತಿದ್ದರು. ಇಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಇವುಗಳಲ್ಲಿ 7 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ನ ಮೊದಲ ಪಟ್ಟಿಯಲ್ಲಿ ವಿವಿಧ ರಾಜ್ಯಗಳ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ.
ಈ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು:
- ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
- ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
- ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
- ವಿಜಯಪುರ – ರಾಜು ಆಲಗೂರು – ಎಸ್.ಸಿ
- ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
- ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್ – ಒಕ್ಕಲಿಗ
- ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ