ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಡೆ ನೀಡಿರುವುದಾಗಿ ಲೈವ್ ಲಾ ಡಾಟ್ ಕಾಮ್ ವರದಿ ತಿಳಿಸಿದೆ.
5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ.
ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ ಮೌಲ್ಯಾಂಕನ ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ದ್ವಿಸದಸ್ಯ ಪೀಠ ಪರೀಕ್ಷೆಗೆ ಅವಕಾಶ ನೀಡಿ ತೀರ್ಪು ನೀಡಿತ್ತು.
ಈ ನಿಟ್ಟಿನಲ್ಲಿ ಹೈಕೋರ್ಟ್ ನ ದ್ವಿಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.