ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ (Madhugiri Taluk of Tumkur District) ಮಿಡಿಗೇಶಿ ಪೊಲೀಸರು ಮಾಜಿ ಬಿಗ್ ಬಾಸ್ ಸ್ಪರ್ಧಿ ಡೋನ್ ಪ್ರತಾಪನನ್ನು ಅರೆಸ್ಟ್ ಮಾಡಿದ್ದಾರೆ.
ಡೋನ್ ಪ್ರತಾಪ್ ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.
ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ವಿರುದ್ಧ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ (Public and environmentalists) ಆಕ್ರೋಶ ವ್ಯಕ್ತಪಡಿಸಿದರು.
ಡೋನ್ ಪ್ರತಾಪ್, ಹೊಂಡದ ರೀತಿ ಇರುವ ಗುಂಡಿಯಲ್ಲಿನ (In the deep pit) ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದ ತಕ್ಷಣ ಅಲ್ಲಿ ದೊಡ್ಡ ಮಟ್ಟದಲ್ಲಿ ಸ್ಪೋಟವಾಗಿ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡು ಬಂದಿದೆ.
ಯಾವೆಲ್ಲ ಕೆಮಿಕಲ್ ಹಾಕಿದರೆ ಬ್ಲಾಸ್ಟ್ ಆಗುತ್ತೆ ಎಂದು ಲೈವ್ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸರವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು ಎಂದು ತಿಳಿದು ಬಂದಿದೆ.