BREAKING

ಧಾರ್ಮಿಕ

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ: ಕಾರ್ಯಲಯ ಉದ್ಘಾಟನೆ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಉದ್ಘಾಟನಾ ಸಮಾರಂಭ ಡಿ.15 ರಂದು ಮಹಾಲಿಂಗೇಶ್ವರ ದೇವಸ್ಥಾನದ ಎದುರು ನಡೆಯಿತು.

ದೀಪಪ್ರಜ್ವಲನೆ ನೆರವೇರಿಸಿ ಮಾತನಾಡಿದ ಮಹಾಲಿಂಗೇಶ್ವರ ದೇವಸ್ಥಾನದ  ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಈ ವರ್ಷವೂ ಅದಕ್ಕಿಂತ ಅದ್ದೂರಿಯಾಗಿ ನಡೆಯುವುದರಲ್ಲಿ ಯಾವೂದೇ ಸಂಶಯವಿಲ್ಲ ಎಂದು ಉದ್ಯಮಿ ಕೇಶವ ಪ್ರಸಾದ್ ಮುಳಿಯ ಹೇಳಿದರು.

ಹಿಂದೂಗಳ ಒಳಿತಿಗಾಗಿ ನಡೆಯುವ ಕಲ್ಯಾಣೋತ್ಸವದಲ್ಲಿ ಯಾವೂದೇ  ವೈಮನಸ್ಸಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಬೇಕು. ಧರ್ಮ ಸಂರಕ್ಷಣೆಗಾಗಿ ಈ ಅದ್ದೂರಿ ಕಾರ್ಯಕ್ರಮದ ರೂವಾರಿ ಅರುಣ್ ಪುತ್ತಿಲರಿಗೆ ಧನ್ಯವಾದಗಳು  ಎಂದರು. 

ಗೌರವಾಧ್ಯಕ್ಷರಾದ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಈ ಬಾರಿ ನಾವೆಲ್ಲ ಒಂದಾಗಿದ್ದೇವೆ. ಹಿಂದೂ ಧರ್ಮಕ್ಕೆ ಆಗುತ್ತಿರುವ ಅನ್ಯಾಯಕ್ಕೆ ನಮ್ಮ ಒಗ್ಗಟ್ಟೊಂದೇ ಪರಿಹಾರ. ಇಂತಹ ಧಾರ್ಮಿಕ ಕಾರ್ಯಕ್ರಮದಿಂದ ನಾವೆಲ್ಲ ಒಂದು ಎನ್ನುವುದನ್ನು ಸಾರಬಹುದು ಎಂದರು.

ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿನದ ಕಾರ್ಯಕ್ರಮದಲ್ಲಿ ಎಲ್ಲಾ ಹಿಂದೂ ಬಾಂಧವರು ಭಾಗವಹಿಸಬೇಕು ಎಂದು ಸುರೇಶ್ ಪುತ್ತೂರಾಯ ಹೇಳಿದರು.

ಪ್ರಾಸ್ತಾವಿಕ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ  ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪ್ರತಿ ಹಿಂದೂಗಳ ಮನೆಗೆ ತಲುಪಲಿದೆ. ಎರಡು ದಿನದ ಕಾರ್ಯಕ್ರಮವನ್ನು ನಮ್ಮ ಕಾರ್ಯಕ್ರಮವೆಂಬಂತೆ ಎಲ್ಲಾ ಹಿಂದೂ ಬಂಧುಗಳು ಪಾಲ್ಗೊಳ್ಳಬೇಕು ಮತ್ತು ಪ್ರತಿ ಮನೆಗಳಿಂದ ಹೊರಕಾಣಿಕೆ ಸಮರ್ಪಣೆಯಾಗಬೇಕೆಂದು ಅರುಣ್ ಪುತ್ತಿಲ ಹೇಳಿದರು.

ದೇವಳದ ಅರ್ಚಕರಾದ ವಿ.ಎಸ್ ಭಟ್ ದೀಪಪ್ರಜ್ವಲನೆಗೊಳಿಸಿ ಶುಭಹಾರೈಸಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಉದ್ಯಮಿ ಶಶಾಂಕ್ ಕೊಟೇಚಾ, ಹಾಗೂ ನಿವೃತ್ತ ಸೇನಾಧಿಕಾರಿ ಚಂದಪ್ಪ ಮೂಲ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು,  ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ಅಧ್ಯಕ್ಷರಾದ ರಾಜು ಶೆಟ್ಟಿ, ಲಕ್ಷ್ಮಣ ಸಂಪ್ಯ, ಮಹಿಳಾ ಘಟಕದ ಸಂಚಾಲಕರಾದ ರಜತಾ ಗಿರೀಶ್ ಭಟ್,  ಸಹಸಂಚಾಲಕಿ ಪುಷ್ಪಾ ರಾಜೇಶ್, ಹರಿಣಿ ಪುತ್ತೂರಾಯ, ಮಲ್ಲಿಕಾ ಪ್ರಸಾದ್, ಕಡಬ ಘಟಕದ ಕಾರ್ಯಾಧ್ಯಕ್ಷರಾದ ವೆಂಕಟರಮಣ ಕಡಬ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಪ್ರವೀಣ್ ನಾಯ್ಕ್ ಪಾಂಗಾಳಾಯಿ,  ತಾರಾನಾಥ ಸವಣೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಸಂಚಾಲಕ ಮನೀಶ್ ಕುಲಾಲ್ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು , ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಪಕ್ಷದ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಕಾರ್ಯಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

Related Posts

No Content Available