BREAKING

ಜಿಲ್ಲೆ

ಕೊಕ್ಕಡ : ಬಸ್-ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!!

ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತ

ಕೊಕ್ಕಡ: ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ(52) ಎಂದು ಗುರುತಿಸಲಾಗಿದೆ.

ಆಂಧ್ರಪ್ರದೇಶದಿಂದ ಅಯ್ಯಪ್ಪ ಮೃತಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…