ಯುವ ಕ್ರಿಕೆಟಿಗನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ.
ಮೃತ ಯುವಕನನ್ನು ಉದ್ಯಾವರ ಕೇದಾರ್ ಬೊಳ್ಳೆ ನಿವಾಸಿ ಕ್ರಿಕೆಟರ್ ಆದಿತ್ಯ(24) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿ ಬಳಿಕ ಮನೆಗೆ ಬಂದು ಭಾನುವಾರ ಮುಂಜಾನೆ ನೇಣಿಗೆ ಕೊರಳೊಡ್ಡಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.