ಪುತ್ತೂರು: ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ವಕೀಲ, ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ
ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.
ಮೃತರು ಪತ್ನಿ ಮತ್ತು ಮಗುವನ್ನು ಕುಟುಂಬಸ್ಥರನ್ನು ಹಾಗು ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.