Friday, November 22
Share News

ಕಾಸರಗೋಡು: ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ 18 ರಂದು (ಶುಕ್ರವಾರ) ಸಂಜೆ 4 ಗಂಟೆ ಸುಮಾರಿಗೆ ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬಂದ ಆರೋಪಿ ಮುಹಮ್ಮದ್ ಚೌಹರ್ ಜಿಸ್ವಾನ್ (24) ನೌಕರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

 

ಇರಿತಕ್ಕೊಳಗಾದ ವ್ಯಕ್ತಿ ಉಳಿಯತ್ತಡ್ಕ ನಿವಾಸಿ ಅಬ್ದುಲ್ ರಜಾಕ್ (38) ಎಂಬಾತ ಎಂಆರ್‌ಐ ಸ್ಕ್ಯಾನಿಂಗ್‌ ವಿಭಾಗದಲ್ಲಿ ತಾಂತ್ರಿಕ ಸಿಬ್ಬಂದಿಯಾಗಿದ್ದಾನೆ.

ಈ ಕುರಿತು ಕೇಸು ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಮಹಿಳೆಗೆ ಸಂಬಂಧಿಸಿದ ವಿಚಾರವೇ ದೌರ್ಜನ್ಯಕ್ಕೆ ಕಾರಣ ಎಂದು ಹೇಳಲಾಗಿದೆ.

ಹಲ್ಲೆ ನಡೆಸಿ ಪರಾರಿಯಾಗಿರುವ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ದೃಶ್ಯಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ. ವಿದೇಶಕ್ಕೆ ದಾಟುವ ಸಾಧ್ಯತೆ ಇರುವುದರಿಂದ ವಿಮಾನ ನಿಲ್ದಾಣಗಳಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಇದರ ಆಧಾರದ ಮೇಲೆ ಸೋಮವಾರ ರಾತ್ರಿ ಬಂಧಿಸಲಾಗಿದೆ. ಕಾಸರಗೋಡು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಯುವಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


Share News

Comments are closed.

Exit mobile version