Friday, November 22
Share News

ಮಂಗಳೂರು: ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ ನಡೆಯಿತು.

ಮಂಗಳೂರು ವಕೀಲರ ಸಂಘದ ಸದಸ್ಯರಾದ ಜಯಪ್ರಕಾಶ್ ಹಾಗೂ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದೆ. ಅದರೆ ಪೊಲೀಸರು ಈವರೆಗೂ ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘದ ಸದಸ್ಯರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್ ವಿ ರಾಘವೇಂದ್ರ ಅವರು ಪ್ರತಿಭಟನೆ ನೇತೃತ್ವ ವಹಿಸಿ, 24 ಗಂಟೆಗಳ ಒಳಗೆ ಆರೋಪಿಯನ್ನು ಬಂಧಿಸದಿದ್ದಲ್ಲಿ ಜಿಲ್ಲಾ ಹಾಗೂ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಠಾಣಾ ನಿರೀಕ್ಷಕ ಟಿ ಡಿ ನಾಗರಾಜ್ ಅವರ ಕುಮ್ಮಕಿನಿಂದ ತನಿಖೆ ದಿಕ್ಕು ತಪ್ಪಿಸುತ್ತಿದ್ದು, ಕೂಡಲೇ ಅಮಾನತುಗೊಳಿಸಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಮೋನಪ್ಪ ಭಂಡಾರಿ, ಕೆ ಶಂಭುಶರ್ಮ, ಅಶೋಕ ಅರಿಗ, ಪೃಥ್ವಿರಾಜ್ ರೈ, ರವೀಂದ್ರನಾಥ್ ಪಿ ಎಸ್, ನರಸಿಂಹ ಹೆಗಡೆ, ನಂದಕೀಶೋರ್, ಪುಷ್ಪಲತಾ ಯು ಕೆ, ಸುಮನಾ ಶರಣ್ ಹಾಗೂ ಹಲವಾರು ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು.

ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಜೊತೆ ಕಾರ್ಯದರ್ಶಿ ಜ್ಯೋತಿ, ಕೋಶಾಧಿಕಾರಿ ಗಿರೀಶ್ ಶೆಟ್ಟಿ ಹಾಗೂ ಸಮಿತಿ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ವಕೀಲರು, ಪ್ರತಿಭಟನೆಯಲ್ಲಿ ಭಾಗವಹಿಸಿದರು.


Share News

Comments are closed.

Exit mobile version