Gl harusha
ಅಪರಾಧಪ್ರಚಲಿತ

ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ; ಸವಾರ ವಿನ್ಯಾಸ್ ಮೃತ್ಯು!

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವೀಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ :ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವೀಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

Pashupathi

ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್‌ (೨೪) ಎಂದು

akshaya college

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟಿ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಆತ ಮೃತಪಟ್ಟಿದ್ದಾರೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊ೦ಡಿದ್ದಾರೆ. ವಿನ್ಯಾಸ್ ಅವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು ಇವರ ತಂದೆ ಇತ್ತೀಚೆಗಷ್ಟೆ ನಿಧನ ಹೊಂದಿದ್ದರು. ಮನೆಗೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದಾಗಿ ತಾಯಿ ಹಾಗೂ ಸಹೋದರಿ ಮಾತ್ರ ಇರುವ ಕುಟುಂಬ ಕಂಗಾಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts