tamanvi
ಪ್ರಚಲಿತ

7ನೇ ತರಗತಿ ವಿದ್ಯಾರ್ಥಿನಿ ಕುಸಿದುಬಿದ್ದು ಸಾವು!

ವಸತಿ ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು 7 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೊಡಗು : ವಸತಿ ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು 7 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ನಡೆದಿದೆ.

ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ಪೂರ್ವಿಕಾ ಎಂಬ ಬಾಲಕಿ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ .

ಕೂಡಲೇ ಶಿಕ್ಷಕರು ಕೂಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರದ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಸದ್ಯ ಶವಾಗಾರದಲ್ಲಿಡಲಾಗಿದೆ. ಬಾಲಕಿಗೆ ಯಾವುದಾದರೂ ಆರೋಗ್ಯ ಸಮಸ್ಯೆ ಇತ್ತಾ..? ವಸತಿ ಶಾಲೆಯಲ್ಲಿ ಏನಾದರೂ ಸಂಭವಿಸಿತ್ತಾ..? ಯಾವುದು ಕೂಡ ತನಿಖೆಯಿಂದಷ್ಟೇ ಹೊರಬರಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…