tamanvi
ಅಪರಾಧಪ್ರಚಲಿತ

ಪ್ರಭು ಚರಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ!

ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ, ದಾರಂದಕುಕ್ಕು ನಿವಾಸಿ ಸುಧಾಕರ್ ಪ್ರಭು (42 ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮನೆಯಲ್ಲಿ ನಾಳೆ ಪೂಜೆ ನಿಗದಿ ಮಾಡಲಾಗಿತ್ತು. ಇಂದು ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ವರ್ಷದ ಹಿಂದೆ ಇವರ‌ ಸಹೋದರ ಪ್ರಭಾಕರ ಪ್ರಭು ಹೃದಯಾಘಾತದಿಂದ ಮೃತಪಟ್ಟಿದ್ದರು. ಬಳಿಕ ಸುಧಾಕರ ಪ್ರಭು ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು ಮೆಸ್ಕಾಂ ಸಿಬ್ಬಂದಿಯಾಗಿರುವ ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

1 of 155