ಪ್ರಚಲಿತಸ್ಥಳೀಯ

ಮಾ. 22ರಂದು ಉಬಾರ್ ಕಂಬಳೋತ್ಸವ | ನದಿ‌ ಹಿನ್ನೀರಿನಲ್ಲಿ ಬೋಟಿಂಗ್, ನದಿ ದಂಡೆಯಲ್ಲಿ ಸಸ್ಯಮೇಳ, ಆಹಾರ ಮೇಳ

ಉಪ್ಪಿನಂಗಡಿ ನೇತ್ರಾವತಿ ನದಿ ತೀರದಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕರೆ ಕಂಬಳ ಕೂಟದ 39ನೇ ಅವೃತ್ತಿಯು ಮಾರ್ಚ್ 22ರಂದು ಉಪ್ಪಿನಂಗಡಿಯ ಕೂಟೇಲು ದಡ್ಡುವಿನ ನದೀತೀರದಲ್ಲಿ ಜರುಗಲಿದೆ. ಈ ಬಾರಿಯ ಕಂಬಳವನ್ನು "ಉಬಾರ್ ಕಂಬಳೋತ್ಸವ” ಎಂಬ ವಿಶೇಷ ರೀತಿಯಲ್ಲಿ ಆಯೋಜಿಸಲಾಗುತ್ತಿದ್ದು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ ನೇತ್ರಾವತಿ ನದಿ ತೀರದಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕರೆ ಕಂಬಳ ಕೂಟದ 39ನೇ ಆವೃತ್ತಿಯು ಮಾರ್ಚ್ 22ರಂದು ಉಪ್ಪಿನಂಗಡಿಯ ಕೂಟೇಲು ದಡ್ಡುವಿನ ನದಿತೀರದಲ್ಲಿ ಜರುಗಲಿದೆ. ಈ ಬಾರಿಯ ಕಂಬಳವನ್ನು “ಉಬಾರ್ ಕಂಬಳೋತ್ಸವ” ಎಂಬ ವಿಶೇಷ ರೀತಿಯಲ್ಲಿ ಆಯೋಜಿಸಲಾಗುತ್ತಿದ್ದು.

akshaya college

ಶಾಸಕರೂ ಆದ ಕಂಬಳ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್ ರೈ ಅವರ ಮಾರ್ಗದರ್ಶನದಲ್ಲಿ ಅದ್ದೂರಿಯಾಗಿ ನಡೆಸಲು ಭರದ ಸಿದ್ಧತೆಗಳು ನಡೆಯುತ್ತಿವೆ.

ಈ ಬಾರಿ ಕಂಬಳದ ಜೊತೆಗೆ ಸಸ್ಯಮೇಳ, ಆಹಾರ ಮೇಳ, ಮಕ್ಕಳಿಗಾಗಿ ಮನರಂಜನಾ ಕಾರ್ಯಕ್ರಮಗಳು ಹಾಗೂ ನೇತ್ರಾವತಿ ನದಿಯ ಹಿನ್ನೀರಿನಲ್ಲಿ ಬೋಟಿಂಗ್ ಸೌಲಭ್ಯ ಇರಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಎಲ್ಲ ಆಕರ್ಷಣೆಗಳು ಕಂಬಳಕ್ಕೆ ಹೆಚ್ಚುವರಿ ಮೆರಗು ತರುವ ಉದ್ದೇಶವನ್ನು ಹೊಂದಿವೆ.

ಮಾರ್ಚ್ 22ರ ಬೆಳಗ್ಗೆ 8 ಗಂಟೆಗೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಕಂಬಳ ಕರೆಯವರೆಗೆ ಕೋಣಗಳ ಭವ್ಯ ಮೆರವಣಿಗೆ ಮೂಲಕ ಕಂಬಳ ಕೂಟಕ್ಕೆ ಚಾಲನೆ ದೊರಕಲಿದೆ. ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಇದಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9:31ಕ್ಕೆ ಕಂಬಳ ಕರೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ರಾಧಾಕೃಷ್ಣ ನಾಯಕ್‌ ಅವರು ಕಂಬಳವನ್ನು ಉದ್ಘಾಟಿಸುವರು.

ಬೆಂಗಳೂರಿನ ಉದ್ಯಮಿ ಹಾಗೂ ಕಂಬಳ ಸಮಿತಿಯ ಉಪಾಧ್ಯಕ್ಷ ನಟೇಶ್‌ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಲಲಿತಾ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕಳ ಮಲಾರುಬೀಡು, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಅವಿನಾಶ್ ಎಚ್. ಗೌಡ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಾಸಕರು, ಕಂಬಳ ಸಮಿತಿಯ ಅಧ್ಯಕ್ಷರಾದ ಅಶೋಕ್‌ ಕುಮಾ‌ರ್ ರೈ ಅವರ ಅಧ್ಯಕ್ಷತೆಯಲ್ಲಿ ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಸಭಾಪತಿ ಯು.ಟಿ. ಖಾದರ್, ಇಂಧನ ಸಚಿವ ಕೆ.ಜೆ. ಜಾರ್ಜ್, ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತ ಖಾತೆ ಸಚಿವರಾದ ಜಮೀರ್ ಅಹ್ಮದ್, ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಸಚಿವರಾದ ನಾಗೇಂದ್ರ, ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಿಶೋರ್ ಕುಮಾ‌ರ್, ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವರಾದ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆ‌ರ್., ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಅಖಿಲ ಭಾರತ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿ. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ, ಮಿಥುನ್ ರೈ, ಉದ್ಯಮಿ ಪ್ರಮೋದ್ ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾ‌ರ್ ರೈಬಾಲ್ಗೊಟ್ಟುಗುತ್ತು. ಮಾಜಿ ಶಾಸಕರಾದ ಸಂಜೀವ ಮಠಂದೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷಡಾ. ರಾಜಾರಾಮ್ ಕೆ.ಬಿ.. ಪುತ್ತೂರು ಬ್ಲಾಕ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷಎಂ.ಬಿ.ವಿಶ್ವನಾಥ ರೈ, ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷಡಾ, ದೇವಿಪ್ರಸಾದ್ ಶೆಟ್ಟಿ ಬೆಳಪು, ಉದ್ಯಮಿ ಉದ್ಗುರ್ ಹಾಜಿ ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಸ್ಪರ್ಧೆಯ ವಿವರ

ಕಂಬಳ ಸ್ಪರ್ಧೆ ಆರು ವಿಭಾಗಗಳಲ್ಲಿ ನಡೆಯಲಿದ್ದು, ನೇಗಿಲು ಕಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಕೋಣಗಳು ಕರೆಗಿಳಿಯಲಿವೆ. ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆಯುವವರಿಗೆ ಚಿನ್ನದ ಬಹುಮಾನ ಹಾಗೂ ವಿಜೇತ ಕೋಣಗಳ ಮಾಲೀಕರಿಗೆ ವಿಜಯ-ವಿಕ್ರಮ ಟ್ರೋಫಿ ನೀಡಿ ಗೌರವಿಸಲಾಗುವುದು.

ತಾರಾ ಆಕರ್ಷಣೆ

ವಿಶೇಷವಾಗಿ, ಕಂಬಳದ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ತಾರೆಯರಾದ ರಚನಾ ರೈ. ವಿನೀತ್ ಕುಮಾರ್, ಸಮಂತ ಅಮೀನ್ ಮತ್ತಿತರರು ಭಾಗವಹಿಸಲಿದ್ದಾರೆ. ಜೊತೆಗೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಹಾಗೂ ಹಿರಿಯ ಓಟಗಾರ ಮಹಾಬಲ ಶೆಟ್ಟಿ ಬಾಲಾಜಿಗುತ್ತು ಅವರನ್ನು ಸನ್ಮಾನಿಸಲಾಗುವುದು ಎಂದು ಅಶೋಕ್‌ ಕುಮಾ‌ರ್ ರೈ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಸಾಮಾನಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 131