ಸೀಮೆಎಣ್ಣೆ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದ ಘಟನೆ ಮಹಾರಾಷ್ಟ್ರದ ಪಾಲ್ಟರ್ ನಲ್ಲಿ ಭಾನುವಾರ ಸಂಭವಿಸಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಭಾನುವಾರ ಸಂಜೆ ಸುಮಾರು 4:55ಕ್ಕೆ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸೀಮೆಎಣ್ಣೆ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಮಹಾರಾಷ್ಟ್ರದ ಪಾಲ್ಸರ್ ಬಳಿ ಫೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದೆ ಈ ವೇಳೆ ಸರ್ವಿಸ್ ರಸ್ತೆಯಲ್ಲಿದ್ದ ಜನ ಸದ್ದು ಕೇಳುತ್ತಿದ್ದಂತೆ ಓಡಿ ಜೀವ ಉಳಿಸಿಕೊಂಡಿದ್ದಾರೆ.
ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಟ್ಯಾಂಕರ್ ಸರ್ವಿಸ್ ರಸ್ತೆಗೆ ಬೀಳುತ್ತಿದ್ದಂತೆ ಸೀಮೆಎಣ್ಣೆ ರಸ್ತೆಗೆ ಚೆಲ್ಲಿದ್ದು ಜೊತೆಗೆ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡಿದೆ ಕೂಡಲೇ ಕಾರ್ಯಾಚರಣೆ ನಡೆಸಿದ ತಂಡ ಬೆಂಕಿ ನಂದಿಸಿ ಟ್ಯಾಂಕರ್ ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಚಾಲಕ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ಲೈಓವರ್