Gl
ಪ್ರಚಲಿತರಾಜ್ಯ ವಾರ್ತೆ

“ದಾಖಲೆ ಇಲ್ಲದಿದ್ದರೂ ಭಯ ಬೇಡ” | 4500 ಜಮೀನಿನ ಗಿಫ್ಟ್ ಬಗ್ಗೆ ಗ್ರಾಮಸ್ಥರಿಗೆ ಒಡೆಯರ್ ಅಭಯ!

ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯ‌ರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟಿಕರಣ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯ‌ರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟಿಕರಣ ನೀಡಿದ್ದಾರೆ.

rachana_rai
Pashupathi
akshaya college
Balakrishna-gowda

ಚಾಮರಾಜನಗರದಲ್ಲಿ (Chamarajanagara) 4,500 ಎಕರೆ ಜಮೀನು ಅರಮನೆಗೆ ಸೇರಿದ್ದು ಎಂಬುದಕ್ಕೆ ದಾಖಲೆ ಇದೆ. ಆದ್ರೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಅರಮನೆ ಹೆಸರಿಗೇ ಜಮೀನು ಬಂದರೂ ನಾವು ಅದನ್ನು ಅವರಿಗೇ ಬಿಟ್ಟು ಕೊಡುವ ವ್ಯವಸ್ಥೆ ಮಾಡ್ತಿವಿ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಹೇಳಿದ್ದಾರೆ.

pashupathi

ಅರಮನೆಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಯಚಾಮರಾಜೇಂದ್ರ ಒಡೆಯರ್ ಅವರು ನೀಡಿರುವ ದಾನದ ಬಗ್ಗೆ ಗೊತ್ತಿಲ್ಲ. ದಾನಪತ್ರ ಹಾಗೂ ದಾಖಲೆಗಳಿದ್ದರೆ ರೈತರು ತಂದುಕೊಡಲಿ. ಮಹಾರಾಜರು ಜಮೀನು ನೀಡಿದ್ದರೆ, ಅದನ್ನು ಕಿತ್ತುಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಆ ಕಾಲದಲ್ಲಿ ಮಹಾರಾಜರು ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಅವರನ್ನು ಒಕ್ಕಲೆಬಿಸುವ ಕೆಲಸ ಮಾಡಲ್ಲ. ಗ್ರಾಮಸ್ಥರು ತಮ್ಮ ಬಳಿ ಇರುವ ಗಿಫ್ಟ್ ದಾಖಲೆಯನ್ನು ಅರಮನೆ ಕಚೇರಿಗೆ ತಲುಪಿಸಲಿ. ಈ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಮಾತನಾಡಲು ಪ್ರಯತ್ನ ಪಟ್ಟೆ. ದೂರವಾಣಿ ಕರೆ ಮಾಡಿದ್ದೆ ಸ್ವೀಕರಿಸಿಲ್ಲ. ಮೇಸೇಜ್‌ಗೂ ರೀಪ್ಲೆ ಮಾಡಿಲ್ಲ. ಗ್ರಾಮಸ್ಥರು ಯಾವುದೇ ಸಂದರ್ಭದಲ್ಲಾದರೂ ಅರಮನೆ ಕಚೇರಿಗೆ ಗಿಫ್ಟ್ ಕೊಟ್ಟಿರುವ ದಾಖಲೆ ಇದ್ದರೆ ಖಂಡಿತ ಕೊಡಿ. ಗ್ರಾಮಸ್ಥರ ಬಳಿ ಗಿಫ್ಟ್ ಕೊಟ್ಟ ದಾಖಲೆ ಇಲ್ಲದಿದ್ದರೂ ಅವರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…