ಪ್ರಚಲಿತ

ಪಹಲ್ಗಾಮ್ ದಾಳಿ: ಇಬ್ಬರು ಉಗ್ರರ ಮನೆ ಸ್ಫೋಟ!

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರ ಮನೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಶಪಡಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರ ಮನೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಶಪಡಿಸಲಾಗಿದೆ.

Shani-pooja

ನಿನ್ನೆ ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರ ಮನೆಗಳು ನಾಶವಾಗಿದೆ. ಭದ್ರತಾ ಪಡೆಗಳು ಇಬ್ಬರು ಎಲ್ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ನ ಮನೆಗಳ ಒಳಗೆ ಶೋಧ ನಡೆಸುತ್ತಿದ್ದಾಗ ಮನೆಗಳಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟಕಗಳಿಂದ ಬೆಂಕಿ ಹೊತ್ತುಕೊಂಡು ಇಡೀ ಮನೆಗಳು ನಾಶವಾಗಿವೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ನಿವಾಸಿ ಥೋಕರ್ ಮಂಗಳವಾರದ ಪಹಲ್ಗಾಮ್ ಹತ್ಯಾಕಾಂಡದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದರೆ, ಪುಲ್ವಾಮಾ ಜಿಲ್ಲೆಯ ಟ್ರಾಲ್ ನಿವಾಸಿ ಶೇಖ್ ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹರಸಾಹಸ! 100 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿ!

ಕಿಡಿಗೇಡಿಗಳ ಕೃತ್ಯದಿಂದ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು…