tamanvi
ಪ್ರಚಲಿತ

ಸೋನು ನಿಗಮ್ ವಿರುದ್ಧ ಕ್ರಮ ಕೈಗೊಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ!

D_shiva_bhat
ಕನ್ನಡಿಗರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಠಿಣ ಕ್ರಮ ಜರುಗಿಸಿದ್ದು, ಸೋನು ನಿಗಮ್ ಪಾಲ್ಗೊಳ್ಳುವ ಯಾವುದೇ ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿಯ ಸದಸ್ಯರು ಪಾಲ್ಗೊಳ್ಳದಂತೆ ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕನ್ನಡಿಗರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಠಿಣ ಕ್ರಮ ಜರುಗಿಸಿದ್ದು, ಸೋನು ನಿಗಮ್ ಪಾಲ್ಗೊಳ್ಳುವ ಯಾವುದೇ ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿಯ ಸದಸ್ಯರು ಪಾಲ್ಗೊಳ್ಳದಂತೆ ನಿರ್ಧರಿಸಲಾಗಿದೆ.

maithri

ಈ ಬಗ್ಗೆ ಸೋಮವಾರ ನಗರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ನರಸಿಂಹಲು, ಸೋನು ನಿಗಮ್ ಅವರು ಈವರೆಗೂ ಕನ್ನಡಿಗರ ಕ್ಷಮೆ ಕೇಳಲಿಲ್ಲ. ಇನ್ನು ಮುಂದೆ ಸೋನು ನಿಗಮ್ ಅವರಿಂದ ಚಿತ್ರರಂಗದವರು ಮ್ಯೂಸಿಕಲ್ ನೈಟ್ಸ್ ಮಾಡುವುದಿಲ್ಲ. ಅವರ ಬಳಿ ಹಾಡನ್ನು ಹಾಡಿಸುವುದಿಲ್ಲ. ಈ ಕ್ಷಣದಿಂದಲೇ ಸೋನು ನಿಗಮ್ ಅವರಿಗೆ ಅಸಹಕಾರ ತೋರಬೇಕೆಂದು ನಿರ್ಧಾರ ಮಾಡಲಾಗಿದೆ ಎಂದರು.

ಚಿತ್ರರಂಗದಲ್ಲಿ ಕಲಾವಿದರನ್ನು ನಿಷೇಧ ಮಾಡುವಂತಿಲ್ಲ. ಆದರೆ, ಸ್ವಯಂ ಪ್ರೇರಣೆಯಿಂದ ನಿರ್ಮಾಪಕರು, ಸಂಗೀತ ನಿರ್ದೇಶಕರು ಗಾಯಕರನ್ನು ದೂರ ಇಡಬಹುದು. ಕಲಾವಿದರಾಗಲಿ, ಗಾಯಕರನ್ನಾಗಲಿ ಅಧಿಕೃತವಾಗಿ ನಿಷೇಧ ಮಾಡುವ ಅಧಿಕಾರ ವಾಣಿಜ್ಯ ಮಂಡಳಿಗೆ ಇರುವುದಿಲ್ಲ. ಗಾಯಕನನ್ನು ಕೆಲವು ವರ್ಷ ದೂರವಿಟ್ಟು, ಯಾರೂ ಅವಕಾಶ ಕೊಡದೆ ಬುದ್ಧಿ ಕಳುಹಿಸಬಹುದು ಎಂದು ನರಸಿಂಹಲು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…