ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ–ಆಪರೇಟಿವ್ ಸೊಸೈಟಿ ಲಿ 2024-25ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕ ಗಳಿಸಿದ “ ಎ“ ವರ್ಗ ಮತ್ತು “ ಸಿ“ ವರ್ಗದ ಸದಸ್ಯರ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಸಂಘದ ಸದಸ್ಯರ ಮಕ್ಕಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರು. ವಿದ್ಯಾರ್ಥಿ ಪೋಷಕರು 2025 ಮೇ 31ರೊಳಗೆ ತಮ್ಮ ಹತ್ತಿರದ ಶಾಖೆಯಿಂದ ಅರ್ಜಿ ಪಡೆದುಕೊಂಡು, ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರನ್ನು (0824- 2451320) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.