pashupathi
ಅಪಘಾತಪ್ರಚಲಿತ

ನೆಲ್ಯಾಡಿ: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಓರ್ವ ಸಾವು, 18ಕ್ಕೂ ಅಧಿಕ ಮಂದಿಗೆ ಗಾಯ!!

tv clinic
ಭೀಕರ ರಸ್ತೆ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು. 18ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ನೆಲ್ಯಾಡಿ:ರಾಷ್ಟ್ರೀಯ ಹೆದ್ದಾರಿ 75ರಲ್ಲಿ. ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ಇಂದು (ಜೂ.16) ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು. 18ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

akshaya college

ಕಾರ್ಕಳದಿಂದ ಧರ್ಮಸ್ಥಳ ಮಾರ್ಗವಾಗಿ ಸುಮಾರು 30 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್, ಲಾವತಡ್ಕ ಬಳಿ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಂಕರನಾರಾಯಣ ಭಟ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ನಾಲ್ವರನ್ನು ಮಂಗಳೂರಿನ ಇಂಡಿಯನ್ ಆಸ್ಪತ್ರೆಗೆ ಮತ್ತು ಉಳಿದ ಗಾಯಾಳುಗಳನ್ನು ಪುತ್ತೂರಿನ ವಿವಿಧ ಆಸ್ಪತ್ರೆಗಳಿಗೆ ಆಂಬುಲೆನ್ಸ್ ಮೂಲಕ ರವಾನಿಸಲಾಗಿದೆ.

ಅಪಘಾತ ನಡೆದ ತಕ್ಷಣ ಸ್ಥಳೀಯರು ಮತ್ತು ಇತರ ವಾಹನ ಸವಾರರು ರಕ್ಷಣಾ ಕಾರ್ಯದಲ್ಲಿ ತೊಡಗಿ, ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು.

ವಿಷಯ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts