tamanvi
ಅಪರಾಧಪ್ರಚಲಿತ

10 ತಿಂಗಳ ಮಗುವಿನ ಪ್ರಾಣ ಕಸಿದ ತಂದೆ ಎಸೆದ ತುಂಡು ಬೀಡಿ!!

D_shiva_bhat
ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

maithri

ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.

ಪತಿಯ ನಿರ್ಲಕ್ಷ್ಯವೇ ಕಾರಣ

‘ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…

1 of 150