tamanvi
ಪ್ರಚಲಿತ

ಅರಿಯಡ್ಕ: ಮನೆ ಮೇಲೆ ಬಿದ್ದ ಬೃಹತ್ ಬೀಟಿ ಮರ!!

ಅರಿಯಡ್ಕ ಗ್ರಾಮದ ನೇರೋಳಡ್ಕದಲ್ಲಿ  ಕೂಲಿ ಕಾರ್ಮಿಕೆಯ ಜಯಂತಿ ಅವರ ಮನೆಗೆ ಮಂಗಳವಾರ ಬೆಳಿಗ್ಗೆ ಬೃಹತ್ ಗಾತ್ರದ ಬೀಟಿ ಮರ ಬಿದ್ದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರಿಯಡ್ಕ ಗ್ರಾಮದ ನೇರೋಳಡ್ಕದಲ್ಲಿ  ಕೂಲಿ ಕಾರ್ಮಿಕೆಯ ಜಯಂತಿ ಅವರ ಮನೆಗೆ ಮಂಗಳವಾರ ಬೆಳಿಗ್ಗೆ ಬೃಹತ್ ಗಾತ್ರದ ಬೀಟಿ ಮರ ಬಿದ್ದಿದೆ.

ಮರ ಬಿದ್ದು ಮನೆಗೆ ಹಾನಿಯಾಗಿದ್ದು, ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಮನೆ ಮೇಲೆ ಅಳವಡಿಸಿದ್ದ ಶೀಟ್ ಪೂರ್ಣ ಹಾನಿಯಾಗಿದೆ. ಮನೆಯೊಳಗಡೆಯಿದ್ದ ಜಯಂತಿ ಹಾಗೂ ಅವರ ಮಕ್ಕಳಾದ ಧನ್‌’ರಾಜ್, ಚೇತನ್‌’ರಾಜ್‌ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಮರ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸ್ಥಳಕ್ಕೆ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಸದಸ್ಯ ಹರೀಶ್ ರೈ ಜಾರತ್ತಾರು, ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…