tamanvi
ಪ್ರಚಲಿತ

ದ.ಕ., ಉಡುಪಿ ಜಿಲ್ಲಾಧಿಕಾರಿಗಳ ವರ್ಗಾವಣೆ! ಮಂಗಳೂರು ಡಿಸಿಯಾಗಿ ದರ್ಶನ್!

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುನ್ನೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿ ಯಾಗಿ ನೇಮಿಸಲಾಗಿದೆ.

ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಅವರನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಾರ್ಯದರ್ಶಿಯಾಗಿ ವರ್ಗಾಯಿಸಿದ್ದು, ಪ್ರಭಾರ ಹುದ್ದೆಯಲ್ಲಿದ್ದ ಡಾ.ಆರ್. ವಿಶಾಲ್ ಅವರನ್ನು ಬಿಡುಗಡೆಗೊಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…