tamanvi
ಅಪರಾಧಪ್ರಚಲಿತ

ಬಂಟ್ವಾಳ: ಪತಿ,ಗರ್ಭಿಣಿ ಪತ್ನಿ ಆತ್ಮಹತ್ಯೆ!!

ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು,ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು,ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುತ್ತಿಗೆ ಭಾಗದಲ್ಲಿ ಗಾಯಗಳಿವೆ ಎನ್ನಲಾಗಿದೆ.

ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ. ಇವರಿಗೆ ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ.

ಪ್ರಸ್ತುತ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತದ ದಿನಾಂಕವೂ ನಿಗದಿಯಾಗಿತ್ತು ಎನ್ನಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

1 of 154