ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆ ಪ್ರಯುಕ್ತ ಮಂದಾರ್ತಿ ಸಮೀಪದ ಬೂದಾಡಿಯಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಜುಲೈ 6ರಂದು ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ, ಮನೆ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ಬದುಕು ಸಾಗಿಸುವವರು ವಿಶ್ವಕರ್ಮ ಸಮುದಾಯದವರು. ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದೀಗ ಕಡುಬಡವರ ರಕ್ಷಣೆಯ ಕಾರ್ಯ ಮಾಡಿರುವುದು ಶ್ಲಾಘನೀಯ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಗಳ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದ ಸಂದರ್ಭ ನಮ್ಮ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಒಬ್ಬ ವ್ಯಕ್ತಿಗೆ ಸಹಾಯ ಮಾಡಿದರೆ ಜಗತ್ತು ಬದಲಾಗದೇ ಇರಬಹುದು. ಆದರೆ ಆ ವ್ಯಕ್ತಿಯ ಜಗತ್ತೇ ಬದಲಾಗುತ್ತದೆ. ಈ ದೃಷ್ಟಿಕೋನದಿಂದ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಮುತುವರ್ಜಿಯಿಂದ ರೂ.760000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಾಣ ಮಾಡಿ, ಇದೀಗ ಹಸ್ತಾಂತರ ಮಾಡಲಾಗಿದೆ ಎಂದರು.
ಕುAದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸ್ವಂತ ಸೂರನ್ನು ನಿರ್ಮಿಸಲಾಗದವರನ್ನು ಗುರುತಿಸಿ ಅವರಿಗೆ ಮನೆ ನಿರ್ಮಿಸಿ ಕೊಟ್ಟಿರುವುದು ದೇವರು ಮೆಚ್ಚುವ ಕೆಲಸ. ಲಾಭದಲ್ಲಿ ನಿರಾಶ್ರಿತರಿಗೆ ಸಹಾಯ ಹಸ್ತವಲ್ಲದೆ ಮನೆ ನಿರ್ಮಾಣದಂತಹ ಕೆಲಸ ಕೈಗೆತ್ತಿರುವುದು ಶ್ಲಾಘನೀಯವೆಂದರು.
ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಬಾÊ ವಂಡಾರು ಶುಭ ಹಾರೈಸಿದ್ದರು.
ಗಣ್ಯರು ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ಬಳಿಕ ಸಸಿಗಳನ್ನು ವಿತರಣೆ ಮಾಡಿದರು. ಮನೆ ನಿರ್ಮಿಸಿದ ಮಧುಕರ ಆಚಾರ್ಯ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟ ಸಂಸ್ಥೆಯ ಆಡಳಿತ ಮಂಡಳಿಗೆ ಲಲಿತಾ ಆಚಾರ್ಯ ಕೃತಜ್ಞತೆ ಸಲ್ಲಿಸಿದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ನಿವಾಸಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ಶ್ಲಾಘಿಸಿದರು. ನಿರ್ದೇಶಕ ಕೆ. ಯಜ್ಞೇಶ್ವರ ಆಚಾರ್ಯ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ, ಜ್ಯೋತಿ ಎಂ.ವಿ., ರಮೇಶ್ ರಾವ್ ಯು.ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.
ಮನೆಯ ಫಲಾನುಭವಿಗಳಾದ ಗಣೇಶ್ ಆಚಾರ್ಯ ಮತ್ತು ಲಲಿತಾ ದಂಪತಿಗಳಿಗೆ ಮನೆಯನ್ನು ಹಸ್ತಾಂತರ ಮಾಡಲಾಯಿತು.
ನಿರ್ದೇಶಕರಾದ ವೈ.ವಿ. ವಿಶ್ವಜ್ಞಮೂರ್ತಿ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ ಸ್ವಾಗತಿಸಿದರು, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಶಾಖಾವ್ಯವಸ್ಥಾಪಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕಿ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.
ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರ | ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ಯೋಜನೆ | ದುಡಿಮೆ, ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ವಿಶ್ವಕರ್ಮ ಸಮುದಾಯ: ಸಂಸದ ಕೋಟ
Related Posts
ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್’ಗೆ ನೋಟಿಸ್ ನೀಡಿದ ಬಿಜೆಪಿ!
ಸಹಪಾಠಿ ಯುವತಿಗೆ ಲೈಂಗಿಕ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ…
ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಂಡ!
ಮಂಗಳೂರು ಗ್ರಾಹಕರ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಯ ಎಜೆ ಆರೋಗ್ಯ…
ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪದಸ್ವೀಕಾರ
ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ಇದರ…
ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
ಬಡವರಿಗೆ ನೆರವಾಗಲು ವೇಷ ಧರಿಸುತ್ತಿದ್ದ ಅಣ್ಣಪ್ಪ ವಿಧಿಯಾಟಕ್ಕೆ ಬಲಿ!
ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ…
10 ತಿಂಗಳ ಮಗುವಿನ ಪ್ರಾಣ ಕಸಿದ ತಂದೆ ಎಸೆದ ತುಂಡು ಬೀಡಿ!!
ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ…
ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ – ಪೈಲೆಟ್, ಮಗು ಸೇರಿ 6 ಮಂದಿ ಸಜೀವ ದಹನ!!
ಡೆಹ್ರಾಡೂನ್ : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ…
ಪುತ್ತೂರು ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಲುದಾರ ಸತೀಶ್ ಕುಮಾರ್ ಹೃದಯಘಾತದಿಂದ ನಿಧನ!
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್ (56 ವ.) ಹೃದಯಘಾತದಿಂದ…
ಏಪ್ರಿಲ್ 1ರಿಂದ ಈ ವಾಹನಗಳಿಗೆ ಇಂಧನವಿಲ್ಲ.!!
ಹೊಸ ಇಂಧನದ ನಿಯಮದ ಪ್ರಕಾರ, ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಪೆಟ್ರೋಲ್, ಡೀಸೆಲ್…
ಬಂಟ್ವಾಳ: ಪತಿ,ಗರ್ಭಿಣಿ ಪತ್ನಿ ಆತ್ಮಹತ್ಯೆ!!
ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು,ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು…