tamanvi
ಪ್ರಚಲಿತ

ವಿಟಮಿನ್ ಡ್ರಾಪ್ಸ್: ಅಂಗನವಾಡಿ ಮಕ್ಕಳು ಅಸ್ವಸ್ಥ!!

ಈ ಸುದ್ದಿಯನ್ನು ಶೇರ್ ಮಾಡಿ

ಅಂಗನವಾಡಿಯಲ್ಲಿ ಮಂಗಳವಾರ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ಹಾಕಲಾಗಿತ್ತು. ಅಂದು ಸಂಜೆ ಮನೆಗೆ ಬಂದ ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ನಂತರ ವಾಂತಿ ಭೇದಿ ಶುರುವಾಗಿದೆ. ತಕ್ಷಣ ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹಿರೇಸಾನಿ ಅಂಗನವಾಡಿಯಲ್ಲಿರುವ 13 ಮಕ್ಕಳಿಗೆ ಮಂಗಳವಾರ ಸಂಜೆಯಿಂದ ವಾಂತಿ ಭೇದಿ ಶುರುವಾಗಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕೆಲವು ಮಕ್ಕಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪೋಷಕರು ಅಂಗನವಾಡಿಯಲ್ಲಿ ನೀಡಿದ ಡ್ರಾಪ್ಸ್ನಿಂದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಮಾಹಿತಿ ತಿಳಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಶೀಲಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತೀ ಬಣಕಾರ, ಇಲಾಖೆಯ ಅಧಿಕಾರಿ ಗಾಯತ್ರಿ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಹಿರೇಸಾನಿ ಮತ್ತು ಮಸ್ಕಾನಿಯ ಅಂಗನವಾಡಿ ಮಕ್ಕಳಿಗೆ ವಿಟಮಿನ್‌ ಎ ಡ್ರಾಪ್ಸ್ ನೀಡಲಾಗಿದೆ. ಹಿರೇಸಾನಿ ಮಕ್ಕಳಲ್ಲಿ ಮಾತ್ರ ಅನಾರೋಗ್ಯ ಕಂಡು ಬಂದಿದೆ. ಮಕ್ಕಳಿಗೆ ನೀಡುತ್ತಿದ್ದ ನೀರಿನ ಮಾದರಿಯನ್ನು ಸಂಗ್ರಹ ಮಾಡಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿರುವ ಕುರಿತು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…