ನವದೆಹಲಿ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ
ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್ ಜೈಲು ಅಧಿಕಾರಿಗಳು ನಿರ್ಧರಿಸಿದ್ದರು.
ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ ಬಗ್ಗೆ ಅಧಿಕೃತ ಪ್ರಕಟಣೆ
ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿಮಿಷಾ ಅವರು ತನ್ನ ಕ್ಲಿನಿಕ್ ಪಾಲುದಾರನಾಗಿದ್ದ ಯೆಮೆನ್ ದೇಶದ ಪ್ರಜೆ ತಲಾಲ್ ಅಬ್ದು ಮಹಿ ಎಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. 2017ರಲ್ಲಿ ಕೊಲೆ ಪ್ರಕರಣ ನಡೆದಿತ್ತು.
ಯೆಮೆನ್‌ನ ವಿಚಾರಣಾ ನ್ಯಾಯಾಲಯ 2020ರಲ್ಲಿ ನಿಮಿಷಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಯೆಮೆನ್‌ನ ‘ಸುಪ್ರೀಂ ಜುಡಿಷಿಯಲ್ ಕೌನ್ಸಿಲ್’ 2023ರ ನವೆಂಬರ್‌ನಲ್ಲಿ ಈ ಶಿಕ್ಷೆ ಎತ್ತಿ ಹಿಡಿದಿತ್ತು.