tamanvi
ಪ್ರಚಲಿತ

ಸಿಲಿಂಡ‌ರ್ ಸ್ಪೋಟ: ಬಾಲಕ ಸಾವು, 10 ಮನೆಗಳು ಛಿದ್ರ? 7 ಜನರಿಗೆ ಗಂಭೀರ ಗಾಯ!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಭೀಕರ ಸಿಲಿಂಡ‌ರ್ ಸ್ಪೋಟಗೊಂಡು ಹತ್ತು ಮನೆಗಳು ಛಿದ್ರಗೊಂಡಿದ್ದು, ಬಾಲಕನೊಬ್ಬ ಮೃತಪಟ್ಟು, ಏಳು ಜನ ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಆ.15ರ ಶುಕ್ರವಾರ ನಡೆದಿದೆ.

ತಿಮ್ಮರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಘಟನೆ ನಡೆದಿದ್ದು, ಈ ಪರಿಣಾಮ 10 ಕ್ಕೂ ಹೆಚ್ಚು ಮನೆಗಳು ಛಿದ್ರಗೊಂಡಿದೆ ಎಂದು ತಿಳಿದು ಬಂದಿದೆ. ಹಲವರು ಕಟ್ಟಡ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳದಲ್ಲಿ ಎನ್.ಡಿ.ಆ‌ರ್.ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಘಟನೆಯಲ್ಲಿ ಮುಬಾರಕ್ ಎಂಬ ಬಾಲಕ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಹಲವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಸ್ತೂರಿ, ನರಸಮ್ಮ, ಸಬ್ರಿನ್ ಬಾನು, ಫಾತೀಮಾ ಸೇರಿದಂತೆ ಹಲವರಿಗೆ ಗಾಯಗಳಾಗಿವೆ.

ಇದು ಸಿಲಿಂಡ‌ರ್ ಸ್ಫೋಟದಿಂದ ಸಂಭವಿಸಿದ ಅವಘಡವೇ ಅಥವಾ ಇನ್ನಾವುದಾದರು ಸ್ಫೋಟದಿಂದ ಸಂಭವಿಸಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇನ್ನಷ್ಟೇ ನಿಖರ ಕಾರಣ ತಿಳಿದು ಬರಬೇಕಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…