ಸೀತಾಪುರ: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಮಂಗಳವಾರ ಸಂಜೆ ಬಿಇಒ ಅಖಿಲೇಶ್ ಪ್ರತಾಪ್ ಸಿಂಗ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಯನ್ನು ಸೀತಾಪುರದ ಮಹಮೂದಾಬಾದ್ ಬ್ಲಾಕ್‌ನಲ್ಲಿರುವ ನಾ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬ್ರಿಜೇಂದ್ರ ವರ್ಮಾ ಎಂದು ಗುರುತಿಸಲಾಗಿದೆ.