ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಅವರ ಜನ್ಮದಿನಾಚರಣೆ ಪ್ರಯುಕ್ತ ಕೊಡಲ್ಪಡುವ ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ ಸಮಿತಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಹಿರಿಯ ಸಾಹಿತಿಗಳಾದ ಡಾ. ತಾಳ್ತಜೆ ವಸಂತ ಕುಮಾರ, ನಿವೃತ್ತ ಪ್ರಾಂಶುಪಾಲ ಪ್ರೊ. ಝೇವಿಯೆರ್ ಡಿಸೋಜಾ ಇವರು ಆಯ್ಕೆಯಾಗಿದ್ದಾರೆ.
ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಕಾರ್ಯದರ್ಶಿಯಾಗಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಇದ್ದು, ಇವರ ಮಾರ್ಗದರ್ಶನದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅಕ್ಟೋಬರ್ 10ರಂದು ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆ ಪ್ರಯುಕ್ತ ಪುತ್ತೂರಿನ ಪರ್ಲಡ್ಕದ ಬಾಲವನದಲ್ಲಿ ನಡೆಯುವ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿರುವುದು.
ಈ ನಿಟ್ಟಿನಲ್ಲಿ ಸೆಪ್ಟೆಂಬರ್ 23 ರಂದು ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪ್ರಶಸ್ತಿಯ ಸಮಿತಿ ರಚನೆ ಮಾಡಲಾಯಿತು.
2024ನೇ ಸಾಲಿನಲ್ಲಿ ನಡೆಯಬೇಕಿದ್ದ ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮವು ವಿಧಾನ ಪರಿಷತ್ತಿನ ಚುನಾವಣೆ ನಿಮಿತ್ತ ಶಿಷ್ಟಾಚಾರದ ಹಿನ್ನೆಲೆಯಲ್ಲಿ ಕಾರ್ಯಕ್ರಮವು ನಡೆಯಲಿಲ್ಲ. ಈ ನಿಟ್ಟಿನಲ್ಲಿ ಈ ವರ್ಷ ನಡೆಸುವ ಕಾರ್ಯಕ್ರಮದಲ್ಲಿ 2024 ಹಾಗೂ 2025ನೇ ಸಾಲಿಗೆ ಸಂಬಂಧಪಟ್ಟಂತೆ 2 ಪ್ರಶಸ್ತಿಗಳನ್ನು 2 ಬೇರೆ ಬೇರೆ ಕ್ಷೇತ್ರಗಳಲ್ಲಿ ಸೇವಾ ಸಾಧನೆಯನ್ನು ಮಾಡಿದ ಸೂಕ್ತ ವ್ಯಕ್ತಿಗಳಿಗೆ ನೀಡುವುದಾಗಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಾಲೋಚನಾ ಸಭೆಯಲ್ಲಿ ಒಂದಿಷ್ಟು ಹೆಸರುಗಳು ಪ್ರಸ್ತಾಪವಾಗಿದ್ದು ಅಂತಿಮ ನಿರ್ಧಾರ ಸಮಿತಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.