ಪ್ರಚಲಿತ

ವಿದ್ಯೆಯಿಂದ ವಿನಯ, ವಿನಯದಿಂದ ಭ್ರಾತ್ವತ್ವ: ಶ್ರೀ ರಾಜಶೇಖರಾನಂದ ಸ್ವಾಮೀಜಿ | ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಶಾರದಾ ಪೂಜೆ, ಆಯುಧ ಪೂಜೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಮನುಷ್ಯನ  ಜೀವನದಲ್ಲಿ ಸಂಸ್ಕೃತಿ ಎಂಬುದು ಅವಿಭಾಜ್ಯ ಅಂಗ. ಸಂಸ್ಕೃತಿ, ಸಂಸ್ಕಾರದ ಜೊತೆಗೆ ಶಿಕ್ಷಣ    ಸಾಗಬೇಕು. ವಿದ್ಯೆಯಿಂದ   ವಿನಯ, ವಿನಯದಿಂದ ಭ್ರಾತೃತ್ವ ಹಾಗೂ ಭ್ರಾತೃತ್ವದಿಂದ ಧನ  ಗಳಿಸಬಹುದು. ಆದರೆ ಸುಖವು ಧನ ಅಥವ ಸಂಪತ್ತನ್ನು ಹೇಗೆ ಬಳಸುತ್ತೇವೆ ಎಂಬುವುದರಿಂದ ಪ್ರಾಪ್ತವಾಗುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿರವರು ಹೇಳಿದರು.ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ ಪೂಜೆ ಕಾರ್ಯಕ್ರಮದಲ್ಲಿ ಅವರು   ಶುಭಾಶೀರ್ವಚನ ನೀಡುತ್ತಾ ಮಾತನಾಡಿದರು. ಮಾನವ ತನ್ನ ಸಹಜ ಬದುಕಿನಲ್ಲಿ ಜ್ಞಾನ ಸಂಪಾದನೆಗೆ ಆದ್ಯತೆ ನೀಡಬೇಕು, ಆ ಮೂಲಕ ಸತ್ಫಲಗಳನ್ನು ಪಡೆಯಬೇಕು ಮತ್ತು ಸ್ವಚ್ಛ ಸುಂದರ ಬದುಕು ರೂಪಿಸಿಕೊಳ್ಳಬೇಕು ಎಂದರು.

sharada-pooja

akshaya college

ವಿದ್ಯೆಯ ಜೊತೆಗೆ ಧಾರ್ಮಿಕತೆಗೆ, ಸಾಂಸ್ಕೃತಿಕತೆಗೆ ಸಂಸ್ಥೆಯಿಂದ ಹೆಚ್ಚಿನ ಒತ್ತು: ಜಯಂತ್ ನಡುಬೈಲು

ಅಧ್ಯಕ್ಷತೆ ವಹಿಸಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಂತ್ ನಡುಬೈಲ್ ರವರು ಮಾತನಾಡಿ, ಎಲ್ಲರಿಗೂ ಉದ್ಯೋಗವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಪದವಿ ಶಿಕ್ಷಣದೊಂದಿಗೆ ವೃತ್ತಿಪರ ಕೋರ್ಸ್ ಗಳನ್ನು ಇದರ ಜೊತೆಗೆ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳನ್ನು ಆಚರಿಸುತ್ತಿರುವುದು ಸಂಪ್ರದಾಯವಾಗಿದೆ. ವಿದ್ಯೆಯ ಜೊತೆಗೆ ಧಾರ್ಮಿಕತೆಗೆ, ಸಾಂಸ್ಕೃತಿಕತೆಗೆ ಸಂಸ್ಥೆಯು ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದೇವೆ ಎಂದರು.

ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್, ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಕ್ಷಯ ಕಾಲೇಜಿನ ವಾರ್ಷಿಕ ಸಂಚಿಕೆ “ಅಕ್ಷಯ” ಇದನ್ನು ಸ್ವಾಮೀಜಿ ಶ್ರೀ ರಾಜಶೇಖರಾನಂದ ಹಾಗೂ ಇತರ ಗಣ್ಯರಿಂದ ಅನಾವರಣಗೊಳಿಸಲಾಯಿತು

ಸಂಸ್ಕೃತ ಕ್ವಿಜ್, ಸಂಸ್ಕೃತ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ರ್ಯಾಂಕ್ ವಿಜೇತರಿಗೆ ಪ್ರಶಸ್ತಿ ಪತ್ರ ಹಸ್ತಾಂತರ

ಕುಣಿತ ಭಜನೆಯಲ್ಲಿ ಪಾಲ್ಗೊಂಡ ಕಾಲೇಜಿನ ಮೂರು ತಂಡದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿದ್ಯಾರ್ಥಿಗಳನ್ನು ಗಣ್ಯರು ಮುಖೇನ  ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ಚಂದ್ರ ರೈ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ  ರೈ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ   ಧಾರ್ಮಿಕ  ಮುಖಂಡರು, ಕುದ್ರೋಳಿ ಶ್ರೀ ಗೋಕರ್ನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆ , ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಿಜಯಕುಮಾರ್ ಸೊರಕೆ, ರೋಟರಿ ಅಸಿಸ್ಟೆಂಟ್ ಗವರ್ನರ್ ಡಾ.ರಾಜಾರಾಮ್ ಕೆ.ಬಿ, ಬಿಜೆಪಿ ಗ್ರಾಮಾಂತರ ಮಂಡಳಿ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಬಿಲ್ಲವ ಸಂಘದ ಮಾಜಿ ಅಧ್ಯಕ್ಷ  ಕೆ.ಪಿ ದಿವಾಕರ್, ಧನ್ವಂತರಿ ಆಸ್ಪತ್ರೆಯ ಡಾ.ರವಿಪ್ರಕಾಶ್  ,ಡಾ.ರವಿ ಕಕ್ಕೆ ಪದವು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪ್ರತಿಭಾರಂಗದ ಮುಖ್ಯಸ್ಥ ನಾರಾಯಣ ರೈ ಕುಕ್ಕುವಳ್ಳಿ, ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಮಾಜಿ ಕಾರ್ಯನಿರ್ವಹಣಾಧಿಕಾರಿ ಆರ್‌.ಸಿ ನಾರಾಯಣ, ನ್ಯಾಯವಾದಿ ಚಿದಾನಂದ ಬೈಲಾಡಿ, ತಂತ್ರಿಗಳಾದ ಪ್ರೀತಮ್ ಪುತ್ತೂರಾಯ, ಉದ್ಯಮಿ ಶಿವರಾಮ ಆಳ್ವ, ಮಾಜಿ ಡಿ.ಆರ್.ಎಫ್.ಸಿ ಡಾ.ಸೂರ್ಯ ನಾರಾಯಣ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಪೂರ್ವಾಧ್ಯಕ್ಷ ಡಾ.ಶ್ಯಾಮ್ ಪ್ರಸಾದ್ , ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಶಶಿಧರ್ ಕಿನ್ನಿಮಜಲು, ಪದ್ಮಶ್ರೀ ಸೋಲಾರ್ ನ ಪದ್ಮನಾಭ ಶೆಟ್ಟಿ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ನಿತೀಶ್ ಶಾಂತಿವನ, ಬಿಲ್ಲವ ಸಂಘ ಪುತ್ತೂರು ಇದರ ಪದಾಧಿಕಾರಿಗಳು, ಯುವವಾಹಿನಿ ಪುತ್ತೂರು ಇದರ ಪದಾಧಿಕಾರಿಗಳು  ಮತ್ತು ಅನೇಕರು ಪಾಲ್ಗೊಂಡರು.

ಉಪನ್ಯಾಸಕಿ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ಆಯುಧಪೂಜೆ

ಶಾರದಾ ಪೂಜೆ ಮೊದಲು ಕಾಲೇಜಿನ ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ವಾಹನಗಳಿಗೆ, ಕಾಲೇಜಿನ ಯಂತ್ರೋಪಕರಣಗಳಿಗೆ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಕಿಶನ್ ಯು.ರಾವ್ ರವರು ಆಯುಧಪೂಜೆಯನ್ನು ನೆರವೇರಿಸಿ ಬಳಿಕ ಶಾರದಾ ಪೂಜೆ ನೆರವೇರಿತು.

ಪೂರ್ಣಕುಂಭ ಸ್ವಾಗತ

ಕಾರ್ಯಕ್ರಮಕ್ಕೆ ಆಗಮಿಸಿದ  ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿರವರನ್ನು ಮಹಿಳೆಯರು ಪೂರ್ಣಕುಂಭದ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ಕಾಲೇಜು ಆಡಳಿತ ಮಂಡಳಿಯ ಅಧಿಕ ಜಯಂತ್ ನಡುಬೈಲು ದಂಪತಿ ಸ್ವಾಮೀಜಿಯವರಿಗೆ ಹಾರಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೈತ್ರಿ ಎಲೆಕ್ಟ್ರಿಕ್ ಕಂ. ವತಿಯಿಂದ ಎಲೆಕ್ಟ್ರಿಷಿಯನ್ಸ್ ಗಳಿಗೆ ಅರಿತು ಕೊಳ್ಳಿ- ಹ್ಯಾವೆಲ್ಸ್ ಫ್ಯಾಕ್ಟರಿ ಭೇಟಿ

ಪುತ್ತೂರು: ಇಲ್ಲಿನ ಮೈತ್ರಿ ಇಲೆಕ್ಟ್ರಿಕ್ ಕಂ. ಇದರ ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್’ಗಳಿಗೆ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…