ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕಗೊಂಡಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಯವರ ಆದೇಶದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಈ ಆದೇಶ ಹೊರಡಿಸಿದ್ದಾರೆ.
ಶಾರದಾ ಅರಸ್ ಅವರು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದರು.


























