ಪುತ್ತೂರು: ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದ್ದ ನವಿಲು, ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ.
ನವಿಲಿನ ಹೃದಯ ಸೇರಿದಂತೆ ದೇಹದ ಪ್ರಮುಖ ಭಾಗಗಳಿಗೆ ಗಂಭೀರ ಗಾಯವಾಗಿತ್ತು ಎಂದು ತಿಳಿದುಬಂದಿದೆ.
ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನವಿಲು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳೀಯರು ಉಪಚರಿಸಿದ್ದು, ಸಂಜೆ ವೇಳೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದರು.
ಬಳಿಕ ಸೂಕ್ತ ಚಿಕಿತ್ಸೆ ನೀಡಿದರೂ ಬದುಕುಳಿಯುವಲ್ಲಿ ಸಫಲವಾಗಲಿಲ್ಲ ಎಂದು ತಿಳಿದುಬಂದಿದೆ.
























