ಪ್ರಚಲಿತ

ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಮನವಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ -ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಬೆಂಗಳೂರು ಮತ್ತು ಕರ್ನಾಟಕ ಕರಾವಳಿ ನಡುವೆ ಓಡಿಸುವ ಅಗತ್ಯವನ್ನು ಮನವರಿಕೆ ಮಾಡಿದ್ದಾರೆ.

chennai-shopping
maithri

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರನ್ನು ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರ ಕನ್ನಡದವರೆಗೆ ವಿಸ್ತರಿಸಬೇಕಾದ ಅಗತ್ಯವನ್ನು ವಿವರಿಸಿದರು. ಪ್ರತಿ ದಿನ ಉತ್ತರ ಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕೆಂದು ವಿನಂತಿಸಿದರು.

ಅದರೊಂದಿಗೆ, ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆಯ 734 ಕಿ.ಮೀ ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕೂಡಲೇ ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು. ಹಲವು ವರ್ಷಗಳಿಂದ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆಯ ಕೊರತೆ ಇದ್ದು, ಇದೀಗ ನರೇಂದ್ರ ಮೋದಿಯವರ ಸರಕಾರದ ತುರ್ತು ಕ್ರಮಗಳಿಂದಾಗಿ ಸಾಕಷ್ಟು ಪ್ರಗತಿ ಕಂಡು ಬರುತ್ತಿದ್ದು, ಇನ್ನೂ ಹೊಸ ರೈಲುಗಳ ಅಗತ್ಯವಿರುವುದರಿಂದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ನೆರವು ನೀಡಬೇಕೆಂದು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇಬ್ಬರು ಗೆಳತಿಯರ ಜೊತೆ ಮನೆಯಲ್ಲಿದ್ದೆ: ಸುದ್ದಿಗೋಷ್ಠಿಯಲ್ಲಿ ಅರಿವಿಲ್ಲದೇ ಮಾತನಾಡಿದ ಕೆಕೆಆರ್ ಆಟಗಾರ!!

ಐಪಿಎಲ್ ಟರ‍್ನಮೆಂಟ್ ಶುರುವಾಗುವ ಸಿದ್ಧತೆಯಲ್ಲಿದ್ದಾಗಲೇ ಕೆಕೆಆರ್ ಆಟಗಾರ ಬ್ರಾವೋ ಮಾತು ಇದೀಗ…