Gl harusha
ಪ್ರಚಲಿತಸ್ಥಳೀಯ

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ | ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತದಲ್ಲಿ ಮತ್ತೊಂದು ಚುನಾವಣಾ ಹಬ್ಬ ಬಂದಿದೆ. ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು. ಅಂತಹ ವ್ಯಕ್ತಿಗಳಿಗೆ ನಾವು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು.

srk ladders
Pashupathi
Muliya

ಅವರು ಮಾ. 26 ರಂದು ಕಡಬ ತಾಲೂಕಿನ ಬೆಳಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಘಟಕ ಹಾಗೂ ಪುತ್ತೂರು ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಮತದಾನ ಮಾಡುವ ಜೊತೆಗೆ ತಮ್ಮ ಸುತ್ತಮುತ್ತಲಿನ ಜನರನ್ನು ಮತದಾನ ಮಾಡುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕರೆ ನೀಡಿದರು.

ಇನ್ನೊರ್ವ ಸಂಪನ್ಮೂಲ ವ್ಯಕ್ತಿಯಾಗಿದ್ದ ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರೆ ಹಾಗೂ ನರಿಮೊಗರು ಕ್ಲಸ್ಟರ್ ನ ಸಿ. ಆರ್. ಪಿ. ಪರಮೇಶ್ವರಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರಜೆಗಳ ರಾಜಕೀಯ ಹಕ್ಕಾಗಿದ್ದು, ಜೊತೆಗೆ ಕರ್ತವ್ಯವೂ ಆಗಿದೆ. ಅದನ್ನು ಪ್ರತಿಯೊಬ್ಬ ಅರ್ಹ ಮತದಾರ ಅರ್ಥ ಮಾಡಿಕೊಂಡು ತಪ್ಪದೇ ಮತದಾನ ಮಾಡುತ್ತೇನೆಂಬ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಶಂಕರ್ ಭಟ್ ಪಿ. ಮಾತನಾಡಿ, ವಿದ್ಯಾರ್ಥಿಗಳೆಲ್ಲರೂ ತಪ್ಪದೇ ಮತದಾನ ಮಾಡುವ ಜೊತೆಗೆ ಸಮಾಜದ ಎಲ್ಲರೂ ಮತದಾನ ಮಾಡುವಂತೆ ಪ್ರೆರೇಪಿಸಬೇಕು ಎಂದರು.

ಐಕ್ಯೂಎಸಿ ಘಟಕದ ಸಂಯೋಜಕರಾದ ಸ್ವಾಮಿ ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಹರಿಣಾಕ್ಷಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಬೋದಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts