tamanvi
ಪ್ರಚಲಿತ

ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ | ಅವಕಾಶವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡರೆ ಯಶಸ್ಸು: ಕೇಶವ್ ಅಮೈ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಅಕ್ಷಯ ಕಾಲೇಜಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ‘ವಾಣಿಜ್ಯ ವ್ಯೂಹ’ ಭಿತ್ತಿಪತ್ರವನ್ನು ಉದ್ಘಾಟಿಸಲಾಯಿತು.

ಎಸ್.ಆರ್.ಕೆ. ಲ್ಯಾಡರ್ಸ್ ಆಡಳಿತ ನಿರ್ದೇಶಕ ಕೇಶವ್ ಅಮೈ ಅವರು ಕಾರ್ಯಕ್ರಮ ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲಿದ್ದರು ತಮ್ಮ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಾರೆ ಹಾಗೂ ಸಿಕ್ಕ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಯಶಸ್ಸನ್ನು ಪಡೆದುಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಅಕ್ಷಯ್ ಮಾತನಾಡಿ, ಕೇಶವ್ ಅಮೈ ಅವರನ್ನು ಪ್ರೇರಣೆಯಾಗಿ ತೆಗೆದುಕೊಂಡು  ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ಕಾಲೇಜಿನಲ್ಲಿ ಭಿತ್ತಿಪತ್ರ ಅನಾವರಣಗೊಳಿಸಿದ ವಾಣಿಜ್ಯ ವಿಭಾಗಕ್ಕೆ ಶುಭಹಾರೈಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥ ಕಿಶೋರ್ ಕುಮಾರ್ ರೈ ಕೆ. ಶುಭಹಾರೈಸಿದರು.

ವಾಣಿಜ್ಯ ಸಂಘದ ಸಂಯೋಜಕಿ ಮೇಘಶ್ರೀ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇನ್ವಿಕ್ತ ವಾಣಿಜ್ಯ ಸಂಘದ ಕಾರ್ಯದರ್ಶಿ ವಿಂಧುಶ್ರೀ ಉದ್ಘಾಟಕರನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಸುಶ್ಮಿತಾ ಪ್ರಾರ್ಥಿಸಿ, ಇನ್ವಿಕ್ತ ವಾಣಿಜ್ಯ ಸಂಘದ ಅಧ್ಯಕ್ಷ ವಿಖ್ಯಾತ್ ಸ್ವಾಗತಿಸಿದರು. ಕೋಶಾಧಿಕಾರಿ ವೀಕ್ಷಿತ್ ವಂದಿಸಿ, ಅಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…