tamanvi
ಪ್ರಚಲಿತ

ಮಾಳ ಹರ್ಷೇಂದ್ರ ಜೈನ್ ಅವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ 2026 ಪ್ರಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ವಿವಿ ಕ್ಯಾಂಪಸ್ ನ ಕಲಾಗ್ರಾಮ ಸಭಾಭವನದಲ್ಲಿ ನಡೆದ ಕರ್ನಾಟಕ ಪ್ರೆಸ್ ಅಂಡ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನ ಎರಡನೇ ವರ್ಷದ ವಾರ್ಷಿಕೋತ್ಸವದಲ್ಲಿ ಕರ್ನಾಟಕ ಜೈನ್ ಅಸೋಸಿಯೇಷನ್ ನ ನಿರ್ದೇಶಕ ಮತ್ತು ಬಿಎಸ್ಎಂ ಜೈನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಜೈನ್ ಮಾಳ ಅವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ 2026 ನೀಡಿ ಗೌರವಿಸಲಾಯಿತು.

ಸುಮಾರು 40 ವರ್ಷಗಳಿಂದ ಕರ್ನಾಟಕದಾದ್ಯಂತ ಸಾಮಾಜಿಕ, ಶೈಕ್ಷಣಿಕ ವೈದ್ಯಕೀಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಮಾಜ ಸೇವೆ ಮಾಡಿಕೊಂಡು ಬಂದಿರುವ ಜೈನ ಸಮಾಜದ ಮುಖಂಡ ಮತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ನಿರ್ದೇಶಕ ಮತ್ತು ಬಿಎಸ್ಎಂ ಜೈನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಮತ್ತು ಮಹಾಮಾರಿ ಕೊರೋನದ ಸಮಯದಲ್ಲಿ ಕೊರೋನಾ ವಾರಿಯರ್ ಆಗಿ ಕೆಲಸ ಮಾಡಿ ಎಲ್ಲರ ಪ್ರಶಂಸೆಗೆ ಮತ್ತು ಪ್ರಶಸ್ತಿಗೆ ಭಾಜನರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿ ಮಾಳ ಹರ್ಷೇಂದ್ರ ಜೈನ್ ಅವರ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ರಾಜ್ಯ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ, ಹೈಕೋರ್ಟ್ ನ್ಯಾಯಾಧೀಶ ಚಂದ್ರಶೇಖರಯ್ಯ, ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಧರ್ಮಸ್ಥಳದ ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಬೆಂಗಳೂರು ಡಿಸಿಪಿ ಕ್ರೈಂ ಪಿ ರಾಜ ಇಮಾಮ್ ಕಾಸಿಂ, ಎಂಎಲ್ಸಿ ಲಕ್ಷ್ಮೀನಾರಾಯಣ್, ರಾಜ್ಯ ನೌಕರರ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ಪ್ರಿಂಟ್ ಅಂಡ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಚಂದ್ರು ಹಾಗೂ ರಾಜ್ಯದ ಪ್ರಿಂಟ್ ಮತ್ತು ಡಿಜಿಟಲ್ ಮೀಡಿಯಾದ ಮುಖ್ಯಸ್ಥರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…