ಪ್ರಚಲಿತ

ಮಂಗಳೂರಿನಲ್ಲಿ ಗ್ಯಾಸ್ ಅಕ್ರಮ ಮರುಪೂರಣ: ಇಬ್ಬರ ಬಂಧನ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

chennai-shopping
maithri

ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳು.

ಮಾ. 17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್‌ಗಳನ್ನು ಸಂಗ್ರಹಿಸಿ ದೊಡ್ಡ ಹಂಡೆಯಿಂದ ಸಣ್ಣ ಹಂಡೆಗೆ ಮರುಪೂರಣ ಮಾಡುತ್ತಿದ್ದರು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts