tamanvi
ಪ್ರಚಲಿತ

ಕಾರ್ಕಳ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸವಾರ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಹಿಂಬದಿಯಿಂದ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಗುರುವಾರ ನಡೆದಿದೆ.

ಮೃತರನ್ನು ಹಿರಿಯಡ್ಕ ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.

ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಣೇಶ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ.

ಗಣೇಶ್ ಅವರು ಹೆಲ್ಮೆಟ್ ಧರಿಸಿದ್ದರೂ ಸಹ, ಟಿಪ್ಪರ್ ಲಾರಿಯ ಹಿಂಬದಿಯ ಚಕ್ರ ಅವರ ತಲೆಯ ಮೇಲೆ ಹರಿದಿದ್ದರಿಂದ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…