ಪ್ರಚಲಿತ

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ಪಲ್ಟಿ: ಓರ್ವ ಮೃತ್ಯು, ಹಲವರಿಗೆ ಗಾಯ!

GL

ಈ ಸುದ್ದಿಯನ್ನು ಶೇರ್ ಮಾಡಿ

ಮೂಡಿಗೆರೆ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

chennai-shopping
maithri

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕಿಶೋರ್ ಪಿ. ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯುದ್ಧ ಸನ್ನದ್ಧತೆಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಕರೆ! ಸೈನಿಕ ತರಬೇತಿ ವೇಳೆ ಪುತ್ರಿ ಜೊತೆ ಟ್ಯಾಂಕ್ ಏರಿದ ಕಿಮ್ ಜಾಂಗ್ ಉನ್

ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮ ಪುತ್ರಿಯೊಂದಿಗೆ ಟ್ಯಾಂಕ್ ಏರಿ…