tamanvi
ಪ್ರಚಲಿತ

ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆ: ಅಂಬಿಕಾ ವಿದ್ಯಾಲಯದ ಮಹಿಮಾ ಆರ್. ಕೆ. ಪ್ರಥಮ

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡದ ಸೆಂಟರ್ ಫಾರ್ ಮಲ್ಟಿ-ಡಿಸಿಪ್ಲಿನರಿ ಡೆವಲಪ್ಮೆಂಟ್ ರಿಸರ್ಚ್ (CMDR) ಸಂಸ್ಥೆಯು ಭಾರತ ಮತ್ತು ವಿದೇಶಗಳ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಇಂದಿನ ಬದುಕಿಗೆ ಭಾರತೀಯ ಜ್ಞಾನ ಪರಂಪರೆ’ (IKS 2.0) ಪ್ರಬಂಧ ಸ್ಪರ್ಧೆಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ಮಹಿಮಾ ಆರ್. ಕೆ. ಪ್ರಥಮ ಸ್ಥಾನ ಗಳಿಸಿದ್ದಾರೆ.

‘ಭಾರತೀಯ ಜ್ಞಾನ ಪರಂಪರೆ ಎಂಬ ಬೆಳಕ ದೀವಟಿಗೆ: ಅವಲೋಕನ’ ಎಂಬ ಶೀರ್ಷಿಕೆಯಡಿ ಮಹಿಮಾ ಅವರು ಮಂಡಿಸಿದ ಪ್ರಬಂಧವು ಒಟ್ಟು 71.33 ಅಂಕಗಳನ್ನು ಪಡೆಯುವ ಮೂಲಕ 10,000 ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಏಕೈಕ ಕನ್ನಡ ಪ್ರಬಂಧ ಎಂಬ ಹೆಗ್ಗಳಿಕೆಗೆ ಈ ಬರಹ ಪಾತ್ರವಾಗಿರುವುದು ವಿಶೇಷ. ಭಾರತೀಯ ಪರಂಪರೆಯ ಜ್ಞಾನವು ಇಂದಿನ ಆಧುನಿಕ ಬದುಕಿಗೆ ಹೇಗೆ ದೀವಟಿಗೆಯಂತೆ ದಾರಿದೀಪವಾಗಿದೆ ಎಂಬುದನ್ನು ಇವರು ತಮ್ಮ ಪ್ರಬಂಧದಲ್ಲಿ ಸವಿವರವಾಗಿ ವಿಶ್ಲೇಷಿಸಿದ್ದಾರೆ. ಭಾರತೀಯ ಜ್ಞಾನ ಪರಂಪರೆಯ ಮಹತ್ವವನ್ನು ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ವಿಶ್ಲೇಷಿಸಿದ ಇವರ ಬರಹವು ತೀರ್ಪುಗಾರರ ವಿಶೇಷ ಮೆಚ್ಚುಗೆಗೆ ಪಾತ್ರವಾಗಿದೆ.

ವಿಟ್ಲದ ರವಿಶಂಕರ ಕುಳಮರ್ವ ಹಾಗೂ ಇತ್ತಿಚೆಗೆ ಸಾಹಿತ್ಯ ಕ್ಷೇತ್ರದ ಗಣನೀಯ ಸಾಧನೆಗಾಗಿ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಪಡೆದ ಡಾ. ಮೈತ್ರಿ ಭಟ್ ದಂಪತಿಯ ಪುತ್ರಿಯಾಗಿರುವ ಮಹಿಮಾ, ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…