tamanvi
ಪ್ರಚಲಿತ

ಮಾ. 28: ಉಪ್ಪಿನಂಗಡಿಯಲ್ಲಿ `ಉಬಾರ್ ಕಂಬಳೋತ್ಸವ’ | ಕೂಟೇಲು ನದಿ ಕಿನಾರೆಯಲ್ಲಿ ವಿಜಯ ವಿಕ್ರಮ ಜೋಡುಕರೆ ಕಂಬಳ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ೪೦ ನೇ ವರ್ಷದ ಹೊನಲು ಬೆಳಕಿನ `ಉಬಾರ್ ಕಂಬಳೋತ್ಸವ’ವು ಮಾ. 28ರಂದು ಉಪ್ಪಿನಂಗಡಿ ಕೂಟೇಲು ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ತಿಳಿಸಿದ್ದಾರೆ.

ಅವರು ಗುರುವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕೃಪಾಶೀರ್ವಾದ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ನಡೆಯುವ ಈ ಕಂಬಳದಲ್ಲಿ 150ಕ್ಕೂ ಮಿಕ್ಕಿ ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ.

ಎ. 28ರಂದು ಬೆಳಗ್ಗೆ 9.31ಕ್ಕೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಕಂಬಳ ಉದ್ಘಾಟಿಸಲಿದ್ದಾರೆ. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಸಭಾ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಲಿತಾ, ಉದ್ಯಮಿ ಧನ್ಯಕುಮಾರ್ ಬಿಳಿಯೂರುಗುತ್ತು, ಪ್ರವೀಣ್ ಕುಮಾರ್ ಕದಿಕ್ಕಾರುಬೀಡು ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ಸಭಾ ಕಾರ್ಯಕ್ರಮವು ಕಂಬಳ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಭಾಪತಿ ಯು.ಟಿ. ಖಾದರ್, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಹಲವು ಮಂದಿ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಉದ್ಯಮ ಕ್ಷೇತ್ರದ ಎಸ್.ಕೆ. ಆನಂದ್, ಕಂಬಳ ಕ್ಷೇತ್ರದ ಸದಾಶಿವ ಸಾಮಾಗಿ ಸಂಪಿಗೆದಡಿ, ಕಂಬಳ ಹಾಗೂ ಶಿಲ್ಪಶಾಸ್ತçದ ಸೇವೆಗಾಗಿ ಬೆಳ್ಳಿಪ್ಪಾಡಿ ಕೊಡಪೊಟ್ಯ ಸುರೇಶ್ ಕೃಷ್ಣಯ್ಯ ಆಚಾರ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.  ರಾಷ್ಟಿçÃಯ ಜೂನಿಯರ್ ಕಬಡ್ಡಿ ಚಾಂಪಿಯನ್ಶಿಪ್ ಆಟಗಾರ ಅಧೀಶ್ ಶೆಟ್ಟಿ ಬರೆಮೇಲು ಅವರನ್ನು ಅಭಿನಂದಿಸಲಾಗುವುದು.

ಕಂಬಳದಲ್ಲಿ ವಿಶೇಷ ಆಕರ್ಷಣೆಯಾಗಿ ಚಲನ ಚಿತ್ರನಟರಾದ ವಶಿಷ್ಠ ಸಿಂಹ, ಸ್ವರಾಜ್ ಶೆಟ್ಟಿ, ಸನಿಲ್ ಗುರು, ಅರವಿಂದ ಬೋಳಾರ್, ಪುಷ್ಪರಾಜ್ ಬೋಳಾರ್, ಭವ್ಯ ಪೂಜಾರಿ ಮತ್ತು ಶುಕೃತಾ ನಾಗ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಗೌರವಾಧ್ಯಕ್ಷ ನಂದಾವರ ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಕೈಪ, ಸಂಘಟನಾ ಕಾರ್ಯದರ್ಶಿ ಯೋಗೀಶ್ ಎಸ್. ಸಾಮಾನಿ, ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…