tamanvi
ಪ್ರಚಲಿತ

ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ: ಹಂತಕರ ಕಾರು ವಶ!!

ಈ ಸುದ್ದಿಯನ್ನು ಶೇರ್ ಮಾಡಿ

ತೊಕ್ಕೊಟ್ಟು ಫೈಓವರ್‌ನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್‌ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಹಂತಕರು ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ದುಷ್ಕರ್ಮಿಗಳು  ಇನ್ನೋವಾ ಕಾರು (ಕೆಎಲ್‌–86 ಬಿ 6645)ನಲ್ಲಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಪರಾರಿಯಾಗಿದ್ದರು. ಬೆನ್ನಟ್ಟಿದ ಪೊಲೀಸರಿಗೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಬಳಿ ಕಾರು ಪತ್ತೆಯಾಯಿತು. ಆದರೆ ಆರೋಪಿಗಳು ಕಾರನ್ನು ಅಲ್ಲೇ ಬಿಟ್ಟು ಆಟೋ ರಿಕ್ಷಾದಲ್ಲಿ ತಪ್ಪಿಸಿಕೊಂಡಿರುವುದು ತಿಳಿದುಬಂದಿದೆ. ಆರು ಮಂದಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ವಿಟ್ಲ ಮತ್ತು ಮಂಗಳೂರು ಪೊಲೀಸರ ಜಂಟಿ ತಂಡಗಳು ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಶೋಧ ಕಾರ್ಯ ತೀವ್ರಗೊಳಿಸಿವೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…