tamanvi
ಪ್ರಚಲಿತ

ಹಲ್ಲೆ, ಕೊಲೆ ಬೆದರಿಕೆ: ನ್ಯಾಯಕ್ಕಾಗಿ ಪುತ್ತೂರು ಕೆ.ಎಸ್.ಆರ್.ಟಿ.ಸಿ. ನೌಕರರ ನಿಯೋಗ ಆಗ್ರಹ!!

ಈ ಸುದ್ದಿಯನ್ನು ಶೇರ್ ಮಾಡಿ

ಕರ್ತವ್ಯ ನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, ಪೊಲೀಸರ ಸಮ್ಮುಖದಲ್ಲೇ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಎಸ್ಪಿಗೆ ದೂರು ನೀಡಲಾಗಿದೆ.

ಈ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ಪುತ್ತೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಕೋಚಣ್ಣ ಪೂಜಾರಿ ನೇತೃತ್ವದ ನಿಯೋಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್ಪಿ) ದೂರು ನೀಡಿದೆ.

ಮಾರ್ಚ್ 24ರಂದು ಬಿ.ಸಿ.ರೋಡ್ ಘಟಕದ ನಿರ್ವಾಹಕ ಪ್ರಶಾಂತ್ ಅವರು ಪಕಳಕುಂಜ-ವಿಟ್ಲ ಮಾರ್ಗದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ವಿಟ್ಲ ಠಾಣಾ ವ್ಯಾಪ್ತಿಯ ಮುಳಿಯ ಎಂಬಲ್ಲಿ ಎದುರಿನಿಂದ ಬಂದ ಟಿಪ್ಪರ್ ಲಾರಿಯೊಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ವಿಚಾರಿಸಲು ಹೋದಾಗ ಲಾರಿ ಚಾಲಕ ಬಿಲಾಲ್, ನಿರ್ವಾಹಕ ಪ್ರಶಾಂತ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾರ್ವಜನಿಕರ ಮುಂದೆಯೇ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದವರಿಗೂ ತಡೆಯೊಡ್ಡಿ ಗಲಾಟೆ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಹಲ್ಲೆಯಿಂದ ಗಾಯಗೊಂಡ ಪ್ರಶಾಂತ್ ಅವರು ವಿಟ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಪೊಲೀಸರು ಸ್ಥಳ ಮಹಜರು ನಡೆಸಲು ಬಂದಾಗ ಅಲ್ಲಿಗೆ ಆಗಮಿಸಿದ ಸುಧೀರ್ ಮಣಿಯಾಣಿ ಎಂಬಾತ, ಪೊಲೀಸರ ಎದುರೇ “ದೂರು ವಾಪಸ್ ಪಡೆಯದಿದ್ದರೆ ನಿನ್ನನ್ನು ಮುಗಿಸಿ ಜೈಲಿಗೆ ಹೋಗುತ್ತೇನೆ” ಎಂದು ನಿರ್ವಾಹಕನಿಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಂಘಟನೆ ಗಂಭೀರ ಆರೋಪ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…