ಪ್ರಚಲಿತ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್: ಆರೋಪಿ ಗಣೇಶ್ ಪ್ರಸಾದ್ ಬಂಧನ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

chennai-shopping
maithri

ಬಂಧಿತ ಆರೋಪಿ ಕಾಸರಗೋಡು ಜಿಲ್ಲೆ, ಮಂಜೇಶ್ವರದ ಗಣೇಶ್ ಪ್ರಸಾದ್ (41) ಎಂದು ಗುರುತಿಸಲಾಗಿದೆ.

2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ್ದ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಕಂಕನಾಡಿ ನಗರ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ, ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts