tamanvi
ಪ್ರಚಲಿತ

ಉಜಿರೆ: ಈಜಲು ನೀರಿಗಿಳಿದ ಬಾಲಕ ಮಹಮ್ಮದ್ ಹಫೀಝ್ ಮುಳುಗಿ ಸಾವು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಈಜಲು ನೀರಿಗಿಳಿದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ನಡ ಗ್ರಾಮದ ಅಂತ್ರಾಯಪಲ್ಕೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

maithri

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಅವರ ಪುತ್ರ ಮಹಮ್ಮದ್ ಹಫೀಝ್(14) ಸಾವನ್ನಪ್ಪಿದ ಬಾಲಕ.

ಅಂತ್ರಾಯಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಈಜಲು ಹೋದ ನಾಲ್ವರು ಬಾಲಕರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…